ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿರುವ ಪೆಟ್ರೋಲ್-ಡೀಸೆಲ್ ದರದಿಂದ ಬೇಸತ್ತಿರುವ ಜನರು ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದಾಗಿ ಜೇಬಿನ ಹೊರೆ ಕಡಿಮೆಯಾಗುವುದರ ಜೊತೆಗೆ ಪರಿಸರ ಮಾಲಿನ್ಯವೂ ಕಡಿಮೆಯಾಗಲಿದೆ. ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಅನುಕೂಲವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ಸ್ ನಿರ್ಮಿಸಲಾಗುತ್ತಿದೆ. ನಮ್ಮ ಬೆಂಗಳೂರಿನ ಹೃದಯ ಭಾಗದಲ್ಲಿಯೂ ಹೆಚ್ಚುವರಿ ಚಾರ್ಜಿಂಗ್ ಸ್ಟೇಷನ್ ಗಳ ಅಳವಡಿಕೆಗೆ ಬೆಸ್ಕಾಂ ಸಿದ್ಧತೆ ನಡೆಸಿದೆ. 


COMMERCIAL BREAK
SCROLL TO CONTINUE READING

ಹೌದು, ಸಿಲಿಕಾನ್ ಸಿಟಿಯ 74 ಕಡೆಗಳಲ್ಲಿ ಈಗಾಗಲೇ 136 ಚಾರ್ಜಿಂಗ್ ಸ್ಟೇಷನ್ಗಳನ್ನು (Charging Stations) ನಿರ್ಮಿಸಲಾಗಿದ್ದು,  ಬೆಂಗಳೂರಿನ ಹೃದಯ ಭಾಗದಲ್ಲಿ 123 ಹೆಚ್ಚುವರಿ ಚಾರ್ಜಿಂಗ್ ಸ್ಟೇಷನ್ ಗಳ ಅಳವಡಿಕೆಗೆ ಬೆಸ್ಕಾಂ (BESCOM) ಮುಂದಾಗಿದೆ.


ಇದನ್ನೂ ಓದಿ- Electric Vehicle: ಎಲೆಕ್ಟ್ರಿಕ್ ವಾಹನ ಮಾಲೀಕರಿಗೆ ಈ ಸರ್ಕಾರದಿಂದ ಸಿಗಲಿದೆ ಭರ್ಜರಿ ಗಿಫ್ಟ್


500 ಕಡೆಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣ:
ವಾಸ್ತವವಾಗಿ, ಎಲೆಕ್ಟ್ರಿಕ್ ವಾಹನಗಳ (Electric Vehicle) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 500 ಕಡೆಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಯೋಜಿಸಿರುವ ಬೆಸ್ಕಾಂ, ಪ್ರಥಮ ಹಂತದಲ್ಲಿ 123 ಕಡೆ ಚಾರ್ಜಿಂಗ್ ಸ್ಟೇಷನ್ ನಿರ್ಮಿಸಲು ಯೋಜನೆ ರೂಪಿಸಿದೆ. ಪ್ರತೀ ಯುನಿಟ್ ಗೆ 48 ಲಕ್ಷ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು ಬೆಸ್ಕಾಂ ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಚಾರ್ಜಿಂಗ್ ಸ್ಟೇಷನ್ ಗಳ ಅಳವಡಿಕೆಗೆ ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.


ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣಕ್ಕೆ ಬೆಸ್ಕಾಂ ಭೂಮಿಯ ವ್ಯವಸ್ಥೆ ಮಾಡಿಕೊಡಲಿದ್ದು,  ಚಾರ್ಜಿಂಗ್ ಪವರ್ ಗೆ ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ರಿಯಾಯಿತಿಯನ್ನೂ ನೀಡುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.


ಇದನ್ನೂ ಓದಿ- Hero Electric: ಈಗ ಸುಲಭವಾಗಿ ಹೀರೋ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸಿ, ಕಂಪನಿಯಿಂದಲೇ ಸಿಗುತ್ತೆ ಸಾಲ ಸೌಲಭ್ಯ
 
ದೇಶದ ಇತರ ಮೆಟ್ರೋ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಅತಿ ಕಡಿಮೆ ವೆಚ್ಚದಲ್ಲಿ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಲಭ್ಯವಾಗುತ್ತಿದೆ.  ಇತರ ನಗರಗಳಲ್ಲಿ 13 ರಿಂದ 15 ರೂ. ವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಬೆಂಗಳೂರಲ್ಲಿ 6 ರೂಪಾಯಿಗೆ 1 ಯುನಿಟ್ ಚಾರ್ಜಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ.  ಅಂದರೆ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನದ ಮಾಲೀಕರು ಯುನಿಟ್ ಗೆ 6 ರೂಪಾಯಿ ಪಾವತಿಸಬೇಕಾಗುತ್ತದೆ. ಈ ಪೈಕಿ ವಿದ್ಯುತ್ ಗೆ 1 ರೂ. ಹಾಗೂ ಖಾಸಗಿ ಸಂಸ್ಥೆಯ ಸೇವೆಗೆ 5 ರೂ. ವೆಚ್ಚವಾಗುತ್ತದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.