ಸದ್ಯಕ್ಕೆ ಶಾಲೆ ತೆರೆಯಬೇಡಿ: ರಾಜ್ಯ ಸರ್ಕಾರಕ್ಕೆ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು
ನವೆಂಬರ್ 22ರಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಶಾಲೆಗಳನ್ನು (Schools) ಪುನರಾರಂಭಿಸುವ ಕುರಿತು ಗಂಭೀರವಾದ ಚರ್ಚೆಯಾಗಿದೆ.
ಬೆಂಗಳೂರು: ಮಹಾ ಕ್ರೂರಿ ಕೊರೊನಾ ನಿಯಂತ್ರಣವಾಗದಿದ್ದರೂ ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದು ಶಾಲೆಗಳನ್ನು ಆರಂಭಿಸಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯು ''ಡಿಸೆಂಬರ್ ತಿಂಗಳಲ್ಲಿ ಶಾಲೆಗಳನ್ನು ತೆರೆಯುವುದು ಕೂಡ ಸೂಕ್ತವಲ್ಲ" ಎಂದು ಶಿಫಾರಸು ಮಾಡಿದೆ.
ಕೋವಿಡ್ 19 (Covid 19) ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ರೂಪಿಸಿರುವ ಸಮಿತಿ. ಹಾಗಾಗಿ ಈಗಾಗಲೇ ಹೇಳಿದಂತೆ ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದು ಶಾಲೆಗಳನ್ನು ಆರಂಭಿಸಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ನವೆಂಬರ್ 22ರಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಶಾಲೆಗಳನ್ನು (Schools) ಪುನರಾರಂಭಿಸುವ ಕುರಿತು ಗಂಭೀರವಾದ ಚರ್ಚೆಯಾಗಿದೆ. ಹಲವು ಆಯಾಮಗಳಿಂದ ಸಮಾಲೋಚನೆ ನಡೆಸಿದ ಸಮಿತಿಯು ಅಂತಿಮವಾಗಿ ಡಿಸೆಂಬರ್ ತಿಂಗಳಲ್ಲಿ ಶಾಲೆ ತೆರೆಯುವುದು ಸರಿಯಾದ ಕ್ರಮವಲ್ಲ ಎಂದು ನಿರ್ಧರಿಸಿದೆ.
ನೀವು ಧರಿಸುತ್ತಿರುವ Mask ಅಸಲಿಯೇ/ನಕಲಿಯೇ ಎಂದು ಹೀಗೆ ತಿಳಿಯಿರಿ
ತಜ್ಞರ ಜೊತೆಗೆ ಚರ್ಚಿಸಿ ತೆಗೆದುಕೊಂಡ ತೀರ್ಮಾನವನ್ನು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಸಭೆಯು ರಾಜ್ಯ ಸರ್ಕಾರಕ್ಕೆ ವರದಿ ರೂಪದಲ್ಲಿ ನೀಡಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಶಾಲೆಗಳನ್ನು ಆರಂಭಿಸುವ ಬಗ್ಗೆ ಸಭೆ ನಡೆಸುತ್ತಿದ್ದು ಅವರು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಅನ್ನು ಎಷ್ಟರ ಮಟ್ಟಿಗೆ ಗಂಭೀರವಾಗಿ ಪರಿಗಣಿಸುವರು ಎಂಬುದನ್ನು ಕಾದುನೋಡಬೇಕಾಗಿದೆ.
ಮುಂದಿನ ಕೊರೊನಾ ಅಲೆ ಸುನಾಮಿಯಂತೆ ಇರಲಿದೆ ಎಂದ ಸಿಎಂ ಉದ್ಧವ್ ಠಾಕ್ರೆ
ಸದ್ಯ ದಿನನಿತ್ಯ ಸರಿ ಸುಮಾರು 1,700 ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿವೆ. ಚಳಿಗಾಲ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ತೀವ್ರಗೊಳ್ಳಬಹುದು. ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ಉಲ್ಬಣವಾಗಬಹುದು. ಆದುದರಿಂದಲೂ ಡಿಸೆಂಬರ್ ತಿಂಗಳಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿದೆ.
ಚಳಿ ಕಡಿಮೆ ಆಗಲು ಆರಂಭಿಸಿದ ನಂತರ ಮತ್ತು COVID-19 ಹರಡುವಿಕೆ ನಿಯಂತ್ರಣಕ್ಕೆ ಬಂದ ನಂತರ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯುವುದು ಸೂಕ್ತ ಎಂಬುದಾಗಿ ಕೂಡ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿದೆ ಎಂದು ತಿಳಿದುಬಂದಿದೆ.