ಬೆಂಗಳೂರು: ರಮೀಳಾ ಉಮಾಶಂಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದೆ.  ನಾಗಪುರ ವಾರ್ಡ್‍ನ ಜೆಡಿಎಸ್ ಸದಸ್ಯ ಭದ್ರೇಗೌಡರಿಗೆ ಉಪಮೇಯರ್ ಸ್ಥಾನ ಒಲಿಯುವುದು ಬಹುತೇಕ ಖಚಿತ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಬಿಬಿಎಂಪಿ ಉಪಮೇಯರ್ ಚುನಾವಣೆ ಜೊತೆಗೆ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದ್ದು, ಪ್ರಮುಖ ಸಮಿತಿ ಪಡೆಯಲು ಜೆಡಿಎಸ್, ಕಾಂಗ್ರೆಸ್ ಹಾಗೂ ಪಕ್ಷೇತರ ಸದಸ್ಯರ ನಡುವೆ ಪೈಪೋಟಿ ಪ್ರಾರಂಭವಾಗಿದೆ. 


ಉಪಮೇಯರ್ ಸ್ಥಾನದ ಅವಕಾಶವಿರುವ ಜೆಡಿಎಸ್ ಪಕ್ಷದವರಿಗೆ ಒಟ್ಟು 4 ಸ್ಥಾಯಿ ಸಮಿತಿಗಳು ಸಿಗುವ ನಿರೀಕ್ಷೆ ಇದೆ. ಏತನ್ಮಧ್ಯೆ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಶಿಕ್ಷಣ, ತೋಟಗಾರಿಕೆ ಹಾಗೂ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿಯನ್ನು ಪಡೆದುಕೊಂಡಿರುವ ಜೆಡಿಎಸ್ ಈ ಬಾರಿಯೂ ಈ ನಾಲ್ಕು ಸಮಿತಿಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.


ಇನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತಕ್ಕೆ ಬೆಂಬಲ ನೀಡಿರುವ ಪಕ್ಷೇತರರೂ ಕೂಡ ಕನಿಷ್ಠ 2 ಸ್ಥಾಯಿ ಸಮಿತಿಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದ್ದು, ಪ್ರಬಲ ಲಾಬಿ ನಡೆಸಿದ್ದಾರೆ.