Bharat Jodo Yatra : ಕನ್ಯಾಕುಮಾರಿಯಿಂದ ಶುರುವಾಗಿರುವ ಭಾರತ ಐಕ್ಯತಾ ಯಾತ್ರೆಯು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಈ ಯಾತ್ರೆ ಕರ್ನಾಟಕದತ್ತಲ್ಲೂ ಹೆಜ್ಜೆ ಹಾಕುತ್ತಿದೆ. ಈ ಐತಿಹಾಸಿಕ ಯಾತ್ರೆಯನ್ನು ಕರ್ನಾಟಕಕ್ಕೆ ಸ್ವಾಗತಿಸಲು ಕಾಂಗ್ರೆಸ್ ಸರ್ವ ರೀತಿಯಲ್ಲೂ ತಯಾರು ಮಾಡಿಕೊಳ್ಳುತ್ತಿದೆ. ಕರ್ನಾಟಕದತ್ತ ಆಗಮಿಸುತ್ತಿರುವ ಯಾತ್ರೆಯನ್ನು ಬರಮಾಡಿಕೊಳ್ಳಲು ಒಗ್ಗೂಡುವಂತೆ ಕಾಂಗ್ರೆಸ್ ಮನವಿ ಮಾಡಿಕೊಂಡಿದೆ. ಬನ್ನಿ, ಸರ್ವರೂ ಈ ಯಾತ್ರೆಯಲ್ಲಿ ಹೆಜ್ಜೆ ಹಾಕಿ, ಇದು ದೇಶಕ್ಕಾಗಿ ನಡಿಗೆ ಎಂಬ ಕರೆಯ ಮೂಲಕ ಇಡೀ ನಾಡನ್ನು ಸ್ವಾಗತಿಸುತ್ತಿದೆ.
ಇದನ್ನೂ ಓದಿ : Mysuru Dasara : ನಾಡಹಬ್ಬ ದಸರಾಗೆ ಚಾಮರಾಜನಗರ ಜಟ್ಟಿ ತಾಲೀಮು; ಮುಷ್ಠಿ ಕಾಳಗಕ್ಕೆ ರಕ್ತ ಹರಿಸಲು ರೆಡಿ
ಕಳೆದ ತಿಂಗಳಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಈ ಯಾತ್ರೆಯ ಮೂಲಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,570 ಕಿಮೀ ನಡೆಯಲಿದ್ದಾರೆ.
ಈ ಭಾರತ್ ಜೋಡೋ ಯಾತ್ರೆಯು ಸುಮಾರು ಐದು ತಿಂಗಳಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಲಿದೆ. ಯಾತ್ರೆಯು ಸೆಪ್ಟೆಂಬರ್ 30 ರಂದು ಕರ್ನಾಟಕವನ್ನು ತಲುಪಲಿದ್ದು, ಇಲ್ಲಿಯೇ 21 ದಿನಗಳ ಕಾಲ ಮುಂದುವರೆಯಲಿದೆ. ಬಳಿಕ ತಿರುವನಂತಪುರಂ, ಕೊಚ್ಚಿ, ನಿಲಂಬೂರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಲಗಾಂವ್, ಇಂದೋರ್, ಕೋಟಾ, ದೌಸಾ, ಅಲ್ವಾರ್, ಬುಲಂದ್‌ಶಹರ್, ದೆಹಲಿ, ಅಂಬಾಲಾ, ಪಠಾಣ್‌ಕೋಟ್ ಮೂಲಕ ಸಾಗುವ ಯಾತ್ರೆಯು ಜಮ್ಮು ಮತ್ತು ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ : Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.