ನಾಳೆ ಭಾರತರತ್ನ ಪಂ.ಭೀಮಸೇನ್ ಜೋಶಿ ರಂಗಮಂದಿರ ಲೋಕಾರ್ಪಣೆ
ಜಿಲ್ಲಾಡಳಿತ ಭವನದ ಎದುರುಗಡೆ ಇರುವ ಪರಿಸರ ಲೇ ಔಟನಲ್ಲಿ ನಿರ್ಮಾಣಗೊಂಡಿರುವ ಭಾರತರತ್ನ ಪಂ.ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಉದ್ಘಾಟನಾ ಸಮಾರಂಭವು ಜೂ.19 ರಂದು ಸಾಯಂಕಾಲ 5.30 ಗಂಟೆಗೆ ಜರುಗಲಿದೆ.
ಗದಗ: ಜಿಲ್ಲಾಡಳಿತ ಭವನದ ಎದುರುಗಡೆ ಇರುವ ಪರಿಸರ ಲೇ ಔಟನಲ್ಲಿ ನಿರ್ಮಾಣಗೊಂಡಿರುವ ಭಾರತರತ್ನ ಪಂ.ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಉದ್ಘಾಟನಾ ಸಮಾರಂಭವು ಜೂ.19 ರಂದು ಸಾಯಂಕಾಲ 5.30 ಗಂಟೆಗೆ ಜರುಗಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜರುಗುವ ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ರಾಜ್ಯ ವಿಧಾನಪರಿಷತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ಶಾಸಕರುಗಳಾದ ಸಿ.ಸಿ.ಪಾಟೀಲ, ಜಿ.ಎಸ್.ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ ಸದಸ್ಯರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರುಗಳು ಆಗಮಿಸುವರು.ವಿಶೇಷ ಅತಿಥಿಗಳಾಗಿ ಖ್ಯಾತ ಕೊಳಲು ವಾದಕರಾದ ಪಂ. ರಾಕೇಶ ಚೌರಾಸಿಯಾ, ಖ್ಯಾತ ತಬಲಾ ವಾದಕ ಪದ್ಮಶ್ರೀ ವಿಜಯ ಘಾಟೆ, ಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ. ಪಂ.ವೆಂಕಟೇಶಕುಮಾರ ಅವರುಗಳು ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ ಅವರುಗಳು ರಂಗ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸರ್ವರನ್ನು ಸ್ವಾಗತಿಸಿರುತ್ತಾರೆ.
ಜುಗಲ್ ಬಂದಿ ಕಾರ್ಯಕ್ರಮ: ಜೂ.19 ರಂದು ಸಾಯಂಕಾಲ ಭಾರತರತ್ನ ಪಂ.ಭೀಮಸೇನ್ ಜೋಶಿ ರಂಗಮಂದಿರ ಉದ್ಘಾಟನಾ ಕಾರ್ಯಕ್ರಮದ ನಂತರ ಸಾಯಂಕಾಲ 6.30 ಗಂಟೆಗೆ ಖ್ಯಾತ ಕೊಳಲು ವಾದಕರಾದ ಪಂ.ರಾಕೇಶ ಚೌರಾಸಿಯಾ ಹಾಗೂ ಪದ್ಮಶ್ರೀ ಪುರಸ್ಕøತ ಖ್ಯಾತ ತಬಲಾ ವಾದಕರಾದ ವಿಜಯ ಘಾಟೆ ಅವರುಗಳಿಂದ ಜುಗಲ್ ಬಂಧಿ ಕಾರ್ಯಕ್ರಮ ಜರುಗಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.