ಬಾಬು ಜಗಜೀವನ್ ರಾಮ್ ಗೆ ಭಾರತ ರತ್ನ ಕೊಡುವಂತೆ ಒತ್ತಾಯಿಸಿದ ದೇವೇಗೌಡರು
ಬೆಂಗಳೂರು: ಜೆಡಿಎಸ್ ಕಛೇರಿಯಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಜನ್ಮ ದಿನಾಚರಣೆ ಪ್ರಯುಕ್ತ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು " ಜಗಜೀವನ್ ರಾಮ್ ಅವರನ್ನು ಪ್ರಧಾನಿಯನ್ನಾಗಿಸಲು ಒಂದು ಹಂತದಲ್ಲಿ ಪ್ರಯತ್ನ ಮಾಡಿದ್ದೆವು. ಆದರೆ ದೇಶದ ಜನ ಗುರುತಿಸಲಿಲ್ಲ, ಅವರು ಯಾವುದೇ ಇಲಾಖೆಯನ್ನೂ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವುಳ್ಳವರಾಗಿದ್ದರು.ಕೇಂದ್ರದಲ್ಲಿ ಹಲವು ಇಲಾಖೆಗಳಲ್ಲಿ ಸಮರ್ಥವಾಗಿ ಆಡಳಿತ ನಡೆಸಿದವರು ಇವರನ್ನು ಬಿಟ್ಟರೆ ಅಂಥ ಸಮರ್ಥರು ಯಾರೂ ಇಲ್ಲ, ಎಲ್ಲಾ ಇಲಾಖೆಗಳಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದವರು" ಎಂದು ಸ್ಮರಿಸಿದರು.ಇದೇ ಸಂದರ್ಭದಲ್ಲಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅವರು ಆಗ್ರಹಿಸಿದರು.
ಇದೇ ವೇಳೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಸೇರ್ಪಡೆಯಾದರು.ಇವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಾದ್ಯಕ್ಷ ಪಿಜಿಆರ್ ಸಿಂದ್ಯ, ಬೆಂಗಳೂರು ನಗರ ಜಿಲ್ಲಾಅಧ್ಯಕ್ಷ ಆರ್ ಪ್ರಕಾಶ್ ಮುಂತಾದ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು.