ನಮ್ಮ ತಂದೆಯ ಅಭಿವೃದ್ಧಿ ಕಾರ್ಯ ಹೇಳಲು ಮೂರ್ನಾಲ್ಕು ದಿನ ಬೇಕು: ಭರತ್ ಬೊಮ್ಮಾಯಿ
ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಭರತ್ ಬೊಮ್ಮಾಯಿ ಹೇಳಿದರು.
ಹಾವೇರಿ(ಸವಣೂರು) : ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಹೇಳುತ್ತ ಹೋದರೆ ಕನಿಷ್ಠ ಮೂರು ನಾಲ್ಕು ದಿನ ಬೇಕು. ಅಷ್ಟೊಂದು ಸಾಧನೆ ಮಾಡಿದ್ದಾರೆ. ಅವರ ಅಭಿವೃದ್ದಿ ಕಾರ್ಯ ಮುಂದುವರೆಸಲು ಆಶೀರ್ವದಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಸವಣೂರು ತಾಲೂಕಿನ ತೊಂಡೂರು, ಮೆಳ್ಳಾಗಟ್ಟಿ ಪ್ಲಾಟ್ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ರಸ್ತೆಗಳ ನಿರ್ಮಾಣ, ಶಾಲಾ ಕಾಲೇಜು, ಶಿಗ್ಗಾವಿ ಸವಣೂರಿನಲ್ಲಿ ಇನ್ನೂರು ಬೆಡ್ ಆಸ್ಪತ್ರೆಗಳ ನಿರ್ಮಾಣ ಮಾಡಿದ್ದಾರೆ. ಊರಿನ ರಸ್ತೆಗಳು, ರೈತರ ಹೊಲಗಳಿಗೆ ಹೋಗುವ ರಸ್ತೆಗಳು, ಐಟಿಐ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸಕ್ಕರೆ ಕಾರ್ಖಾನೆ, ಖುರ್ಷಾಪುರದಲ್ಲಿ ಗಾರ್ಮೆಂಟ್ ಫ್ಯಾಕ್ಟರಿ, ಜವಳಿ ಪಾರ್ಕ್ ಬಂದಿದೆ. ಈಗಾಗಲೇ ಕ್ಷೇತ್ರದ ಸುಮಾರು 5000 ಮಹಿಳೆಯರಿಗೆ ಉದ್ಯೋಗ ದೊರೆತಿದೆ. ಮುಂದಿನ ದಿನಗಳಲ್ಲಿ ಹತ್ತು ಸಾವಿರ ಮಹಿಳೆಯರಿಗೆ ಉದ್ಯೋಗ ದೊರೆಯಲಿ ಎಂದು ಹೇಳಿದರು.
ಇದನ್ನೂ ಓದಿ:ಒಳಮೀಸಲಾತಿ ಜಾರಿಗೆ ವಿರುದ್ಧವಾಗಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರ: ಗೃಹ ಸಚಿವ ಜಿ.ಪರಮೇಶ್ವರ
ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಕನಕದಾಸರ ಬಾಡ ಅಭಿವೃದ್ಧಿ, ಕನಕದಾಸರ ಕೋಟೆ, ಸಂತ ಶಿಶುನಾಳ ಶರೀಫರ ಊರು ಅಭಿವೃದ್ಧಿ ಮಾಡಲಾಗಿದೆ. ದೇಶದ ಎಕೈಕ ಜಾನಪದ ವಿಶ್ವ ವಿದ್ಯಾಲಯ ನಮ್ಮ ಶಿಗ್ಗಾವಿ ಕ್ಷೇತ್ರದಲ್ಲಿ ಇದು ಹೆಮ್ಮೆಯ ವಿಷಯ ಎಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮನೆ ನಿರ್ಮಾಣ ಮಾಡಲಾಗಿದ್ದು,15 ಸಾವಿರ ಮನೆಗಳ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್ಸಿನ ಢೋಂಗಿ ಜಾತ್ಯಾತೀತತೆಗೆ ದೇವಸ್ಥಾನಗಳ ಒಂದಿಂಚೂ ಜಾಗ ಜಾಸ್ತಿಯಾಗಿಲ್ಲ
ನವೆಂಬರ್ 13 ರಂದು ಎಲ್ಲರೂ ತಪ್ಪದೇ ನಿಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡುವ ಮೂಲಕ ನಿಮ್ಮ ಮನೆ ಮಗನಾಗಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು. ತಂದೆಯವರ ಮಾರ್ಗದರ್ಶನ, ಪಕ್ಷದ ವರಿಷ್ಠರ ಮಾರ್ಗದರ್ಶನ, ಗರು ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ