ಬೆಂಗಳೂರು: ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಈಗಾಗಲೇ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಆದರೆ ನಾಳೆ, ನಾಡಿದ್ದು ನಡೆಯಲಿರುವ ಭಾರತ್ ಬಂದ್ ಗೆ ಪೆಟ್ರೋಲ್ ಬಂಕ್ ಮಾಲೀಕರ ಅಸೋಸಿಯೇಶನ್, ಖಾಸಗಿ ಬಸ್ ಮಾಲಕರ ಸಂಘ,ಟ್ಯಾಕ್ಸಿ ಅಸೋಸಿಯೇಶನ್, ರಾಜ್ಯ ಹೋಟೆಲ್ ಮಾಲಕರ ಸಂಘ, ಏರ್ ಪೋರ್ಟ್ ಟ್ಯಾಕ್ಸಿ ಮಾಲಕರ ಸಂಘ ಬೆಂಬಲ ನೀಡಿಲ್ಲ.
ಏತನ್ಮಧ್ಯೆ, ಭಾರತ ಬಂದ್ ನಮ್ಮ ಮೆಟ್ರೋ ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ.
ನಮ್ಮ ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿರುವ ಬಿಎಂಆರ್ಸಿಎಲ್ ಅಧಿಕಾರಿಗಳು ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡರೆ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಮಾರ್ಗದಲ್ಲಿ ಪ್ರತಿ ಮೂರು ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ ಎಂದಿದ್ದಾರೆ.