ಬೆಂಗಳೂರು: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಪಶ್ಚಿಮ ಭಾಗದಲ್ಲಿ 25 ಅಡಿ ಎತ್ತರ ನಾಡ ದೇವಿ ಶ್ರೀ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಸ್ಥಾಪನೆ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಲಾಯಿತು.
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಗೌರವಾನ್ವಿತ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಶಿವರಾಜ ತಂಗಡಿ ಭಾಗವಹಿಸಿದ್ದರು.
ಮುಖ್ಯಮಂತ್ರಿ @siddaramaiah ಅವರು ಕರ್ನಾಟಕ ನಾಮಕರಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ಅಮ್ಮನ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ.… pic.twitter.com/YukBPtAAtu
— CM of Karnataka (@CMofKarnataka) June 20, 2024
ಇದನ್ನೂ ಓದಿ: ಮಾವಿನ ಹಣ್ಣು ತಿನ್ನುವುದರ 05 ಪ್ರಮುಖ ಪ್ರಯೋಜನಗಳು
ಇವರ ಜೊತೆ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ, ಕಾನೂನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಹೆಚ್.ಕೆ. ಪಾಟಿಲ್, ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ಶ್ರೀ ರಾಮಲಿಂಗಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಸಹಕಾರಿ ಸಚಿವ ಶ್ರೀ ಕೆ.ಎನ್. ರಾಜಣ್ಣ ಭಾಗವಹಿಸಿದ್ದರು.ಶಿವಾಜಿ ನಗರ ಕ್ಷೇತ್ರದ ಶಾಸಕ ಶ್ರೀ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಶ್ರೀ ಅಶೋಕ್ ಮಹದೇವಪ್ಪ ಪಟ್ಟಣ್ ಹಾಗೂ ವಿವಿಧ ಪ್ರಾಧಿಕಾರ ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.