Big News: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗಿಸಿ ಹೊತ್ತಿ ಉರಿದ ಶಾಂಪಿಂಗ್ ಮಾಲ್!
ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಎಂದು ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಭೀಕರವಾಗಿ ಹೊತ್ತಿ ಉರಿದಿದೆ. ಪರಿಣಾಮ ಮಾಲ್ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟುಕರಕಲಾಗಿವೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ(Fire Breaksout) ಸಂಭವಿಸಿದೆ. ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’(South India Shopping Mall)ನಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಎಂದು ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಪರಿಣಾಮ ಮಾಲ್ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟುಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 6 ಅಗ್ನಿಶಾಮಕ ಸಿಬ್ಬಂದಿ ಕಷ್ಟಪಟ್ಟು ಕಾರ್ಯಾಚರಣೆ ನಡೆಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್(Short Circuit)ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕೆನ್ನಾಲಿಗೆ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು. ಬೆಂಕಿ ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ನಿರಂತರ 2 ಗಂಟೆಗೂ ಅಧಿಕ ಕಾಲ ಯಶಸ್ವಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಗಿಫ್ಟ್ ನೀಡಿದ ರಾಜ್ಯ ಸರ್ಕಾರ
ಮಾಲ್ ನ ಗ್ರೌಂಡ್ ಪ್ಲೋರ್ ನಲ್ಲಿರೋ ಸೂಪರ್ ಮಾರ್ಕೆಟ್(Super Market)ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮಾಲ್ ನ ಬೇಸ್ಮೆಂಟ್ ನಲ್ಲಿರೊ ಸೂಪರ್ ಮಾರ್ಕೆಟ್ ನ ಸ್ಟೋರೇಜ್ ನಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿ ಹೊತ್ತಿಕೊಂಡಿರುವ ವಿಷಯ ಬೀಟ್ ನಲ್ಲಿದ್ದ ಪೊಲೀಸರ ಗಮನಕ್ಕೆ ಬಂದಿದ್ದರಿಂದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿತ್ತು. ತಡಮಾಡದೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಸೌಥ್ ಇಂಡಿಯನ್ ಮಾಲ್(Shopping Mall) ನಲ್ಲಿ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಆದರೆ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.
ಆಕಸ್ಮಿಕ ಬೆಂಕಿಗೆ ಕಬ್ಬು ಬೆಳೆ ಹಾಳು
ಇನ್ನು ಬಾಗಲಕೋಟೆ(Bagalkote) ಜಿಲ್ಲೆಯಲ್ಲಿ ಆಕಸ್ಮಿಕ ಬೆಂಕಿಗೆ ಅಪಾರ ಪ್ರಮಾಣದ ಕಬ್ಬು ಬೆಳೆ ಹಾಳಾಗಿದೆ. 8 ಎಕರೆ ಕಬ್ಬಿನ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡ್ತಿದ್ದಂತೆ ಧಗಧಗಿಸಿ ಹೊತ್ತಿ ಉರಿದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಿಂಬಲಗುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹನಮಂತಗೌಡ ಪಾಟೀಲ ಎನ್ನುವ ರೈತರಿಗೆ ಸೇರಿದ ಸುಮಾರು 8 ಲಕ್ಷ ರೂ. ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ.
ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲು ಜಿಲ್ಲಾಧಿಕಾರಿ ಆದೇಶ
ಹೊಲದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಿಂದ ಬೆಂಕಿಕಡಿ ಬಿದ್ದಿದೆ ಎನ್ನಲಾಗುತ್ತಿದೆ. 8 ಎಕರೆಯಲ್ಲಿ ಅರ್ಧದಷ್ಟು ಕಬ್ಬು(Sugarcane) ಬೆಂಕಿಯ ಕೆನ್ನಾಲಿಗೆ ಸಿಕ್ಕು ಸುಟ್ಟು ಹೋಗಿದೆ. ಬೆಂಕಿ ನಂದಿಸಲು ಗ್ರಾಮದ ಯುವಕರು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದ ಬಳಿಕ ಎಲ್ಲರೂ ಸೇರಿ ಬೆಂಕಿ ನಂದಿಸಿದ್ದಾರೆ. ಇದರಿಂದ ಅಕ್ಕಪಕ್ಕದ ಹೊಲಗಳ ಬೆಳೆಗೆ ಬೆಂಕಿ ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.