Big News: ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಸಿಗುವ ಸಾಧ್ಯತೆ!

Lok Sabha Election 2024: ಪ್ರತಾಪ್‌ ಸಿಂಹ ಬದಲು ಈ ಬಾರಿ ಯಧುವಂಶದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ 3ನೇ ಹೆಸರು ಕೇಳಿಬರುತ್ತಿದೆ. ಅದುವೇ ಶಿಲ್ಪಿ ಅರುಣ್‌ ಯೋಗಿರಾಜ್.‌

Written by - Puttaraj K Alur | Last Updated : Mar 11, 2024, 07:26 PM IST
  • ಈ ಬಾರಿ ಯಾರಿಗೆ ಮೈಸೂರು-ಕೊಡಗು ಲೋಕಸಭಾ ಬಿಜೆಪಿ ಟಿಕೆಟ್?‌
  • ೨ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಮಿಸ್‌ ಆದ್ರೆ ಯಾರಿಗೆ ಸಿಗಲಿದೆ ಟಿಕೆಟ್‌..?
  • ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೇಳಿಬರುತ್ತಿದೆ ೩ನೇ ಹೆಸರು
Big News: ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಸಿಗುವ ಸಾಧ್ಯತೆ! title=
ಯೋಗಿರಾಜ್‌ಗೆ ಬಿಜೆಪಿ ಟಿಕೆಟ್?

Lok Sabha Election 2024: ಈ ಬಾರಿಯೂ ಲೋಕಸಭಾ ಚುನಾವಣಾ ರಣಕಣ ರಂಗೇರುತ್ತಿದೆ. ಇನ್ನೇನು ಕೆಲವೇ ವಾರಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನೇರಿ ಹ್ಯಾಟ್ರಿಕ್‌ ಬಾರಿಸುತ್ತಾರಾ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಈಗಾಗಲೇ ಲೋಕಸಭೆಯ ಎಕ್ಸಿಟ್ ಪೋಲ್ ಬಿಜೆಪಿ ನೇತೃತ್ವದ NDA ಮೈತ್ರಿಕೂಟವೇ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್‌ ತಿಳಿಸಿವೆ. ಹೀಗಾಗಿ ಕೇಂದ್ರದಲ್ಲಿ ಪ್ರಧಾನಿ ಮೋದಿ 3.0 ಸರ್ಕಾರ ರಚನೆಯಾಗಲಿದೆ ಎಂದೇ ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಸೇರಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಕಲ ಸಿದ್ಧತೆ ನಡೆಸಿವೆ. ಈ ನಿಟ್ಟಿನಲ್ಲಿ ಪ್ರಚಾರದ ಭರಾಟೆಯೂ ಜೋರಾಗಿದೆ. 

ಗೆಲ್ಲುವ ಕುದುರೆಗಳಿಗೆ ಟಿಕೆಟ್‌ ನೀಡುವತ್ತ ಪ್ರಮುಖ ಪಕ್ಷಗಳು ಮಾಸ್ಟರ್‌ ಪ್ಲ್ಯಾನ್‌ ಮಾಡುತ್ತಿವೆ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದು, ಹಳಬರಿಗೆ ಗೇಟ್‌ಪಾಸ್‌ ನೀಡುತ್ತಿದೆ. ಕರ್ನಾಟಕದ ಲೋಕಸಮರದ ರಣಕಣವೂ ರಂಗೇರುತ್ತಿದೆ. ಈಗಾಗಲೇ ಕಾಂಗ್ರೆಸ್‌ ಮತ್ತು ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ನಡುವೆ ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಯಾರಿಗೆ ಅನ್ನೋ ಕುತೂಹಲ ತೀವ್ರವಾಗಿದೆ. ಕಳೆದ 2 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರತಾಪ್‌ ಸಿಂಹರಿಗೆ ಈ ಬಾರಿ ಟಿಕೆಟ್‌ ಮಿಸ್‌ ಆಗಲಿದೆ ಅಂತಾ ಹೇಳಲಾಗುತ್ತಿದೆ. ಪ್ರತಾಪ್‌ ಸಿಂಹ ಬದಲಿಗೆ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಲಿದೆ ಅಂತಾ ಹೇಳಲಾಗುತ್ತಿದೆ. 

ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ

ಪ್ರತಾಪ್‌ ಸಿಂಹ ಬದಲು ಈ ಬಾರಿ ಯಧುವಂಶದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ 3ನೇ ಹೆಸರು ಕೇಳಿಬರುತ್ತಿದೆ. ಅದುವೇ ಶಿಲ್ಪಿ ಅರುಣ್‌ ಯೋಗಿರಾಜ್.‌ ಹೌದು, ಈ ಬಾರಿ ಮೈಸೂರಿನ ಪ್ರಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಟಿಕೆಟ್‌ ನೀಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ದೇವರು ರಾಮನ ಬಾಲ ರೂಪವಾದ ರಾಮ ಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ.

ಶ್ರೀರಾಮನ ಸುಂದರ ಮೂರ್ತಿ ಕೆತ್ತನೆಯ ಮೂಲಕ ಪ್ರಸಿದ್ಧಿ ಹೊಂದಿದ ಯೋಗಿರಾಜ್‌ಗೆ ಪ್ರಧಾನಿ ಮೋದಿ ಸೇರಿದಂತೆ ದೇಶ-ವಿದೇಶಗಳಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಹೀಗಾಗಿ ಬಿಜೆಪಿ ಈ ಬಾರಿ ಅವರಿಗೆ ಟಿಕೆಟ್‌ ನೀಡಲಿದೆ ಎಂದು ಹೇಳಲಾಗುತ್ತಿದೆ. ಶೀಘ್ರವೇ ಬಿಜೆಪಿ ತನ್ನ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದು, ಮೈಸೂರು ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ತಿಳಿದುಬರಲಿದೆ.

ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
  

Trending News