ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ  ಹೈಕೋರ್ಟ್ ಬಿಗ್ ರಿಲೀಪ್ ನೀಡಿದೆ. ಸಿಬಿಐ ತನಿಖೆಗೆ ವಹಿಸಿದ್ದನ್ನು ವಾಪಾಸ್ ಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ ಸದ್ಯ ನಿರಾಳರಾಗಿದ್ದಾರೆ.


COMMERCIAL BREAK
SCROLL TO CONTINUE READING

ಸಿಬಿಐ,ಯತ್ನಾಳ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ :
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಇವತ್ತು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಸೋಮಶೇಖರ್, ಉಮೇಶ್ ಅಡಿಗ ಅವರಿದ್ದ ಪೀಠದಿಂದ ಆದೇಶ ಹೊರಬಿದಿದ್ದು, ಎರಡು ಅರ್ಜಿಗಳನ್ನು ವಜಾಗೊಳಿಸಲಾಗಿದೆ.
ಈ ಪ್ರಕರಣ ವಿಚಾರಣೆಗೆ ಅರ್ಹವಾಗಿಲ್ಲ.ಸರ್ಕಾರ ಹಾಗೂ ಸಿಬಿಐ ನಡುವಿನ ವಿವಾದವನ್ನು ಸುಪ್ರೀಂ ಕೋರ್ಟ್ ತಿರ್ಮಾನಿಸಬೇಕು ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.


ಇದನ್ನೂ ಓದಿ : ಶಿಗ್ಲಿ ಬಸ್ಯಾ ದರ್ಶನ್ ಬಗ್ಗೆ ಹಾಗೆಂದಿದ್ದೇಕೆ..?


ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿ ಬಿಜೆಪಿ ಸರ್ಕಾರ 2019ರ ಸೆಪ್ಟೆಂಬರ್ 25 ರಂದು ಆದೇಶ ಹೊರಡಿಸಿತ್ತು. ಅದರಂತೆ ಭ್ರಷ್ಟಾಚಾರ ನಿಗ್ರಹ ಕಾಯಿದೆ 1988ರ ವಿವಿಧ ಸೆಕ್ಷನ್‌ಗಳಡಿ ಸಿಬಿಐ 2020ರ ಅಕ್ಟೋಬರ್ 3ರಂದು ಡಿ.ಕೆ. ಶಿವಕುಮಾ‌ರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆ‌ರ್ ಕಾನೂನುಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕೆಂದು ಕೋರಿ ಶಿವಕುಮಾ‌ರ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸಿಬಿಐ ತನಿಖೆಗೆ 2023 ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.ಇದೇ ವೇಳೆ ಡಿಕೆಶಿ, ಸರಕಾರದ ಅನುಮತಿ ಆದೇಶ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಏಕಸದಸ್ಯಪೀಠ ಕಳೆದ ಏಪ್ರಿಲ್ 20ರಂದು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಬಾಕಿ ಇದ್ದಾಗ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆಯಲಾಗಿದ್ದು ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. 


ಸದ್ಯ ಈ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸುತ್ತಿದೆ.ಕಳೆದು ಗುರುವಾರ ಡಿಕೆ ಶಿವಕುಮಾರ್ ಸಹ ಲೋಕಾ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇನ್ಮುಂದೆ ಸಿಬಿಐ ಸುಪ್ರಿಂ ಮೊರೆ ಹೋಗುತ್ತಾ ಅಥವಾ ಈ ಪ್ರಕರಣ ಇಲ್ಲಿದೆ ಮುಗಿದು ಹೋಗುತ್ತ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ : ಜೈಲಿಗೆ ಹೋದಾಗ ಏನು ಮಾತಾಡಿದ್ರಿ ಎಂದು ಕೇಳಿದ್ರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.