ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂ, ಡಿಕೆಶಿಗೆ ನಿರಾಳ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

Last Updated : Nov 15, 2019, 12:43 PM IST
ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂ, ಡಿಕೆಶಿಗೆ ನಿರಾಳ  title=
file photo

ಬೆಂಗಳೂರು: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ದೆಹಲಿ ಹೈಕೋರ್ಟ್ ಅಕ್ಟೋಬರ್ 23 ರಂದು ಶಿವಕುಮಾರ್ ಅವರಿಗೆ 25 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್‌ನಲ್ಲಿ ನ್ಯಾಯಾಲಯವು ಜಾಮೀನು ನೀಡಿತು. ಎಲ್ಲಾ ದಾಖಲೆಗಳು ತನಿಖಾ ಏಜೆನ್ಸಿಯ ಬಳಿ ಇರುವುದರಿಂದ ಡಿಕೆಶಿ ಸಾಕ್ಷ್ಯಗಳನ್ನು ಹಾಳುಮಾಡಲು ಯಾವುದೇ ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ. ನಾಲ್ಕು ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 3 ರಂದು ಇಡಿ ಬಂಧಿಸಿ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ವಿಶೇಷ ನ್ಯಾಯಾಲಯ ಅಕ್ಟೋಬರ್ 25 ರವರೆಗೆ ವಿಸ್ತರಿಸಿತ್ತು.

ಆಗಸ್ಟ್ 2017 ರಲ್ಲಿ ಐ-ಟಿ ಇಲಾಖೆಯು ಡಿಕೆಶಿ ಅವರ ಕುಟುಂಬ ಮತ್ತು ಸಹವರ್ತಿಗಳ ಒಡೆತನದ ಹಲವಾರು ಮನೆ ಕಚೇರಿಗಳ ಮೇಲೆ ದಾಳಿ ನಡೆಸಿ ಆದಾಯಕ್ಕೆ ಲೆಕ್ಕವಿಲ್ಲದ ಕೋಟ್ಯಂತರ ರೂಪಾಯಿಗಳನ್ನು ಪತ್ತೆ ಹಚ್ಚಿದೆ ಎಂದು ಹೇಳಿಕೊಂಡಿದೆ.

Trending News