ಬೆಂಗಳೂರು: ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ನಾರಾಯಣಗೌಡರನ್ನು ಡಿಸೆಂಬರ್  27 ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ದೇವನಹಳ್ಳಿಯ 5ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಜನವರಿ 6 ರಂದು ಜಾಮೀನು ಮಂಜೂರು ಮಾಡಿತ್ತು. 


COMMERCIAL BREAK
SCROLL TO CONTINUE READING

ಬಿಡುಗಡೆ ಪ್ರಕ್ರಿಯೆ ಮುಗಿದ ಹಿನ್ನೆಲೆ ಜನವರಿ 9ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017 ರಲ್ಲಿ ದಾಖಲಾಗಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಧಕ್ಕೆ ಪ್ರಕರಣದಡಿ ಕುಮಾರಸ್ವಾಮಿ ಲೇ ಔಟ್ ಠಾಣೆ ಪೊಲೀಸರು ವಶಕ್ಕೆ‌ ಪಡೆದಿದ್ದರು.  ನಾರಾಯಣಗೌಡ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ ಹಿನ್ನೆಲೆ ನಿನ್ನೆ ವಶಕ್ಕೆ ಪಡೆದುಕೊಂಡಿಕೊಂಡು ನಗರದ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 


ಇದನ್ನೂ ಓದಿ-ಸಂಗೀತ ನಿರ್ದೇಶಕ ಗುರುಕಿರಣ್‌ ಮನೆಯಲ್ಲಿ ಕಳ್ಳತನ


ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇಂದು ಜಾಮೀನು‌‌ ಪುರಸ್ಕರಿಸಿತು. ಎರಡನೇ ಬಾರಿ ಬಿಡುಗಡೆಯಾಗುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ರಾಷ್ಟ್ರೀಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಕಾಯ್ದೆಯಡಿ (ಎನ್ ಡಿಎಂಎ) ವಶಕ್ಕೆ ಪಡೆದುಕೊಂಡಿದ್ದರು. 


2020ರಲ್ಲಿ ಕೊರೊನಾ ಸಮಯದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಾರಾಯಣಗೌಡ  ಪ್ರತಿಭಟನೆ ಮಾಡಿ ಎನ್ ಡಿಎಂಎ ಕಾಯ್ದೆ ಉಲ್ಲಂಘಿಸಿದ್ದರು.  ಈ ಸಂಬಂಧ ಹಲಸೂರು ಗೇಟ್ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ಸದ್ಯ ಐದು ಸಾವಿರ ನಗದು ಒಬ್ಬರ  ಶ್ಯೂರಿಟಿ ಮೇರೆಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.


ಇದನ್ನೂ ಓದಿ-ಇಂದಿನಿಂದ ದೇವಸ್ಥಾನದಲ್ಲಿ ಡ್ರೆಸ್‌ ಕೋಡ್‌ ನಿಯಮ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.