ಬೆಂಗಳೂರು: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ‘ಬಿಗ್ ಶಾಕ್’ ನೀಡಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ನೀಡುತ್ತಿದ್ದ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.


COMMERCIAL BREAK
SCROLL TO CONTINUE READING

ಹೌದು, ಸಿರಿಧಾನ್ಯ ಬೆಳೆಯುವ ರೈತ(Farmers)ರಿಗೆ ಸರ್ಕಾರ 3 ವರ್ಷದಿಂದ ರೈತ ಸಿರಿ ಹೆಸರಿನಲ್ಲಿ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಸ್ಥಗಿತಗೊಳಿಸಿದೆ. ಒಂದು ಹೆಕ್ಟೇರ್ ನಲ್ಲಿ ಸಿರಿಧಾನ್ಯ ಬೆಳೆದರೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಈ ವರ್ಷ ಅರ್ಜಿ ಪಡೆಯದೆ ಪ್ರೋತ್ಸಾಹಧನ ನಿಲ್ಲಿಸಿದೆ. ಈ ಮೂಲಕ ಸಿರಿಧಾನ್ಯ ಬೆಳೆಯುವ ರೈತರಿಗೆ ಬಿಗ್ ಶಾಕ್ ನೀಡಿದೆ.


'ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿಯವರೇಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ?'


ರಾಜ್ಯ ಸರ್ಕಾರವು 2019–20ನೇ ಸಾಲಿಗೆ ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಉದ್ದೇಶದಿಂದ ‘ರೈತಸಿರಿ’ ಯೋಜನೆ ಜಾರಿಗೊಳಿಸಿತ್ತು. ಈ ಯೋಜನೆಯಡಿ ಸಾಮೆ, ಊದಲು, ನವಣೆ, ಅರ್ಕ, ಕೊರ್ಲೆ, ಬರಗು ಸೇರಿ 6 ಸಿರಿಧಾನ್ಯಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿತ್ತು.


ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ! ಸಚಿವಾಕಾಂಕ್ಷಿಗಳಿಗೆ ಮತ್ತೆ 'ಶಾಕ್' ನೀಡಿದ ಸಿಎಂ


ಒಂದು ಹೆಕ್ಟೇರ್‌ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ₹ 10,000 ನಗದು ಪ್ರೋತ್ಸಾಹಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮುಖಾಂತರ ನೀಡಲಾಗುವುದು. ಪ್ರತಿ ಫಲಾನುಭವಿ ರೈತರಿಗೆ ಬಿತ್ತನೆ ಪ್ರದೇಶದಲ್ಲಿ ಗರಿಷ್ಠ ಎರಡು ಹೆಕ್ಟೇರ್‌ಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಈ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರತಿ ಹೆಕ್ಟೇರ್‌ ಸಿರಿಧಾನ್ಯಕ್ಕೆ ₹ 6,000 ಪ್ರೋತ್ಸಾಹಧನ ನೀಡಿದರೆ ಇನ್ನುಳಿದ ₹ 4,000 ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ನೀಡುತ್ತದೆ.


ಸಿಎಂ ಸ್ಥಾನದಿಂದ ಬಿಎಸ್‌ವೈ ಇಳಿಸಲು ಹೈಕಮಾಂಡ್‌ ಪ್ಲ್ಯಾನ್..!?