ಐಎಎಸ್ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್!
ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ನಡೆಸಿದ ಹಲವು ಅಕ್ರಮಗಳ ಆರೋಪದ ಬಗ್ಗೆ ಅರ್ಜಿಗಳ ಸಮಿತಿ ಮುಂದೆ ಹಾಜರಾಗುವಂತೆ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಐದು ಆರೋಪಗಳ ಬಗ್ಗೆ ಹೇಳಿಕೆ ನೀಡಲು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ನಡೆಸಿದ ಹಲವು ಅಕ್ರಮಗಳ ಆರೋಪದ ಬಗ್ಗೆ ಅರ್ಜಿಗಳ ಸಮಿತಿ ಮುಂದೆ ಹಾಜರಾಗುವಂತೆ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ 106ನೇ ಕೊಠಡಿಯಲ್ಲಿ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಈ ಸಂಬಂಧ ರೋಹಿಣಿ ಸಿಂಧೂರಿಗೆ ವಸತಿ ಇಲಾಖೆ ಪತ್ರ ಬರೆದಿದೆ.
ಇದನ್ನೂ ಓದಿ: 17 ವರ್ಷಗಳಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆ ಗಡಿಪಾರು!
ತನಿಖಾಧಿಕಾರಿಯಾಗಿ ನೇಮಕವಾಗಿರುವ ವಸತಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಮುಂದೆ ಶನಿವಾರ ರೋಹಿಣಿ ಸಿಂಧೂರಿ ವಿಚಾರಣೆಗೆ ಹಾಜರಾಗಲಿದ್ದಾರೆ. ಮೈಸೂರು ಡಿಸಿಯಾಗಿದ್ದ ವೇಳೆ ಕೇಳಿಬಂದಿದ್ದ ಆರೋಪಗಳ ಸಂಬಂಧ ವಿಚಾರಣೆ ನಡೆಯಲಿದೆ.
ಸದ್ಯ ಮುಜರಾಯಿ ಇಲಾಖೆ ಆಯುಕ್ತೆಯಾಗಿರುವ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ಮೈಸೂರು ಡಿಸಿಯಾಗಿದ್ದ ಅವಧಿಯಲ್ಲಿ ರೋಹಿಣಿಯವರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‍ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10 ರಿಂದ 13 ರೂ.ಗೆ ಸಿಗುವ ಪ್ರತಿ ಬ್ಯಾಗ್‍ಗೆ 52 ರೂ. ಕೊಡಲಾಗಿತ್ತು. ಸಾರ್ವಜನಿಕರ ತೆರಿಗೆ ಹಣವನ್ನು ರೋಹಿಣಿಯವರು ದುಂದುವೆಚ್ಚ ಮಾಡಿದ್ದಾರೆಂದು ಆರೋಪಿಸಿದ್ದ ಶಾಸಕ ಸಾ.ರಾ.ಮಹೇಶ್ ತನಿಖೆಗೆ ಆಗ್ರಹಿಸಿದ್ದರು.
ಇದನ್ನೂ ಓದಿ: ಇಂದಿನ ಈ ಸ್ಥಿತಿಗೆ ಸಿದ್ದರಾಮಯ್ಯನವರೇ ನೇರ ಕಾರಣಕರ್ತರು: ಬಿಜೆಪಿ ಆರೋಪ
ಇದಲ್ಲದೆ ಡಿಸಿ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ ನಿರ್ಮಾಣ, ಪಾರಂಪರಿಕ ಮಾರ್ಗಸೂಚಿ ಉಲ್ಲಂಘಿಸಿ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ, ಕೋವಿಡ್‌ನಿಂದ 969 ಮಂದಿ ಮೃತಪಟ್ಟರೂ 238 ಎಂದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದು ಮತ್ತು ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಕಾರಣವೇನು ಅನ್ನೋ ವಿಚಾರದ ಆರೋಪಗಳ ಬಗ್ಗೆ ವಿವರಣೆ ನೀಡುವಂತೆ ರೋಹಿಣಿಯವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.