ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏಪ್ರಿಲ್ 12 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಜೆಡಿಯು ಪಕ್ಷದಿಂದ ಈ ಬಾರಿಯ ಚುನಾವಣೆಯಲ್ಲಿ 30 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಅವರ ಪರ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಹಿತಿ ನೀಡಿದ ಜೆಡಿಯು ಕರ್ನಾಟಕ ಘಟಕದ ಅಧ್ಯಕ್ಷ ಮಾಹಿಮಾ ಪಟೇಲ್, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ 24 ರಿಂದ 30 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಲು ನಿತೀಶ್ ಕುಮಾರ್ ಅವರು ಆಗಮಿಸುತ್ತಿದ್ದಾರೆ" ಎಂದು ಹೇಳಿದರು.


ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದೆ. ನಿತೀಶ್ ಕುಮಾರ ಅವರ ಭೇಟಿಯ ಅನ್ತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಇತರ ಪ್ರಮುಖ ಪಕ್ಷಗಳು ನಮ್ಮ ಬೆಂಬಲವನ್ನು ಪಡೆದುಕೊಳ್ಳಬೇಕಾದ ಸ್ಥಾನದಲ್ಲಿ ಪಕ್ಷವನ್ನು ಗುರುತಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಸೀಟುಗಳನ್ನು ಗೆಲ್ಲುವುದೇ ನಮ್ಮ ಮುಖ್ಯ ಉದ್ದೇಶ ಎಂದು ಪಟೇಲ್ ಹೇಳಿದರು. 


ಈಗಾಗಲೇ ಕೆಲವು ವಿಭಜಿತ ಪಕ್ಷಗಳು ಚುನಾವಣಾ ಮೈತ್ರಿಗಾಗಿ ಪಕ್ಷದ ಮುಖಂಡರನ್ನು ಸಂಪರ್ಕಿಸಿದ್ದು, ಅವರ ಅರ್ಹತೆಯ ಆಧಾರದ ಮೇಲೆ ನಿಸ್ಸಂಶಯವಾಗಿ ಪರಿಗಣಿಸಲಾಗುವುದು ಎಂದರು.


ಜನತಾ ಪರಿವಾರದ ಭಾಗವಾಗಿರುವ ಜೆಡಿಯು ಕರ್ನಾಟಕದಲ್ಲಿ ರಾಮಕೃಷ್ಣ ಹೆಗ್ಡೆ ಮತ್ತು ಹೆಚ್.ಡಿ.ದೇವೇಗೌಡ ಅವರ ನಾಯಕತ್ವದಲ್ಲಿ ಆಳ್ವಿಕೆ ನಡೆಸಿದ್ದರೂ, ಎರಡಕ್ಕೂ ಹೆಚ್ಚು ಬಣಗಳಾಗಿ ವಿಭಜನೆಯಾಗಿದೆ. ಪ್ರಸ್ತುತ ಈ ಪಕ್ಷ ವಿಧಾನಸಭೆಯಲ್ಲಿ ಯಾವುದೇ ಸದಸ್ಯರನ್ನು ಹೊಂದಿಲ್ಲ.