ಬಿಹಾರ ಫಲಿತಾಂಶ : ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಚುನಾವಣೆಯಲ್ಲಿ ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

Written by - Ranjitha R K | Last Updated : Nov 14, 2025, 05:31 PM IST
ಬಿಹಾರ ಫಲಿತಾಂಶ : ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಬಿಹಾರ ಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 

Add Zee News as a Preferred Source

ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಕೇಳಿದಾಗ, "ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ. ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಹೊಸ ತಂತ್ರಗಾರಿಕೆ ರೂಪಿಸುತ್ತೇವೆ" ಎಂದು ತಿಳಿಸಿದರು.

ಇದನ್ನೂ ಓದಿ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ

ಬಿಹಾರದಲ್ಲಿ ಎನ್ ಡಿಎ ಸರ್ಕಾರ ಮಹಿಳೆಯರ ಖಾತೆಗೆ 10 ಸಾವಿರ ಹಣ ಹಾಕಿದ್ದು, ಮಹಿಳೆಯರ ಮತ ಪ್ರಮಾಣ 11% ಏರಿಕೆಯಾಗಿದೆ. ಇದು ಫಲಿತಾಂಶಕ್ಕೆ ಕಾರಣವೇ ಎಂದು ಕೇಳಿದಾಗ, "ನಾನು ಇನ್ನು ವಿವರವಾಗಿ ಪರಿಶೀಲನೆ ಮಾಡುತ್ತೇನೆ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.

ತುಂಗಭದ್ರಾ ಐಸಿಸಿ ಸಭೆ ಬಗ್ಗೆ ಮಾತನಾಡಿದ ಅವರು  "ತುಂಗಭದ್ರಾ ಅಣೆಕಟ್ಟಿನ ಗೇಟ್ ಗಳ ದುರಸ್ಥಿ ನಡೆಯುವವರೆಗೂ ಇರುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಅವರಿಗೆ ತೀರ್ಮಾನ ಮಾಡಲು ಬಿಟ್ಟಿದ್ದೇವೆ. ಉಳಿದಂತೆ ಕಾಲುವೆಗಳ ದುರಸ್ಥಿ ಕಾಮಗಾರಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ" ಎಂದು ತಿಳಿಸಿದರು.

ಇದನ್ನೂ ಓದಿ : ಅನಾಥಯಾಯ್ತು ಪರಿಸರ ಲೋಕ.. ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ!

 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News