"ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ, ನಿಮ್ಮ ಶುಭ ಹಾರೈಕೆಯೊಂದೇ ಸಾಕು" 

ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.

Written by - Manjunath N | Last Updated : May 12, 2024, 06:56 PM IST
  • ಮೇ 15ರ ನನ್ನ ಹುಟ್ಟುಹಬ್ಬದಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ ಹಾಗೂ ಯಾರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ
  • ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡದಿರಲು ನಿರ್ಧರಿಸಿದ್ದೇನೆ
  • ಎಲ್ಲಾ ನನ್ನ ಅಭಿಮಾನಿಗಳು ನೀವಿದ್ದಲ್ಲಿಯೇ ಶುಭ ಕೋರಿ ಹರಸಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ
 "ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ, ನಿಮ್ಮ ಶುಭ ಹಾರೈಕೆಯೊಂದೇ ಸಾಕು"  title=

ಬೆಂಗಳೂರು, ಮೇ 12: ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.

ಈ ಕುರಿತಾಗಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು 'ಉತ್ತರ ಭಾರತದ ಚುನಾವಣಾ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಮೇ 15ರ ನನ್ನ ಹುಟ್ಟುಹಬ್ಬದಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ ಹಾಗೂ ಯಾರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಅಲ್ಲದೆ ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡದಿರಲು ನಿರ್ಧರಿಸಿದ್ದೇನೆ. ಹಾಗಾಗಿ ಎಲ್ಲಾ ನನ್ನ ಅಭಿಮಾನಿಗಳು ನೀವಿದ್ದಲ್ಲಿಯೇ ಶುಭ ಕೋರಿ ಹರಸಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.

ಇದನ್ನೂ ಓದಿ: ಗಂಡನಿಗಾಗಿ ಕಿಡ್ನಿ ತ್ಯಾಗ, ಮಕ್ಕಳಿಗಾಗಿ ಸ್ವರ್ವಸ್ವವನ್ನೇ ಧಾರೆಯೆರೆದ ಮೀನಾ ತೂಗುದೀಪ..!

ಇನ್ನೂ ಮುಂದುವರೆದು ಅವರು ಹುಟ್ಟುಹಬ್ಬದ ಶುಭಾಶಯಗಳನ್ನು ಬಿತ್ತರಿಸುವ ಕಟ್-ಔಟ್‌ಗಳು, ಪೋಸ್ಟರ್‌ಗಳು, ಬ್ಯಾನರ್‌ಗಳು ಅಥವಾ ಜಾಹೀರಾತುಗಳನ್ನು ಯಾರೂ ಪ್ರದರ್ಶಿಸಬಾರದು. ನಿಮ್ಮ ಪ್ರೀತಿ, ಬೆಂಬಲ ಮತ್ತು ಶುಭ ಹಾರೈಕೆಗಳು ಸಾಕು, ಅವು ನನ್ನನ್ನು ರಕ್ಷಿಸುತ್ತವೆ ಎಂದು ಅವರು ಮನವಿ ಮಾಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News