Bisiuta Naukarara Protest: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬಿಸಿಯೂಟ ನೌಕರರು ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದಲೂ ಆಗಮಿಸಲಿರುವ ಬಿಸಿಯೂಟ ಕಾರ್ಯಕರ್ತೆಯರು ಇಂದು ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ತಮ್ಮ ಪ್ರತಿಭಟನಾ ರ್ಯಾಲಿಯನ್ನು ಕೈಗೊಳ್ಳಲಿದ್ದಾರೆ.
ಸರ್ಕಾರಗಳು ಪದೆ ಪದೇ ವಂಚಿಸುವ ಕೆಲಸ ಮಾಡ್ತಿವೆ ಎಂದು ಬೇಸರ ವ್ಯಕ್ತಪಡಿಸಿರುವ ಬಿಸಿಯೂಟ ಕಾರ್ಯಕರ್ತೆಯರು ನಮಗೆ ಅನಿರ್ದಿಷ್ಟಾವಧಿ ಮುಷ್ಕರ ಬಿಟ್ಟು ಬೇರೆ ದಾರಿ ಇಲ್ಲ ಎಂದು ಹೋರಾಟಕ್ಕೆ ಕರೆ ನೀಡಿದ್ದಾರೆ. ಇನ್ನೂ ಬೆಂಗಳೂರಿನ ಕೆಎಸ್‌ಆರ್ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿರುವ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ವರೆಗೆ ತೆರಳಲಿದ್ದು ಈ ಹಿನ್ನೆಲೆ ಮೆಜೆಸ್ಟಿಕ್ ಸುತ್ತಲೂ ಭಾರೀ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ.
ಇದನ್ನೂ ಓದಿ- ನಾವಿಕನಿಲ್ಲದೆ ಮುಳುಗುತ್ತಿರುವ ಬಿಜೆಪಿ ಹಡಗಿನಿಂದ ಎಲ್ಲರೂ ಹೊರ ಜಿಗಿಯುವವರೇ?: ಕಾಂಗ್ರೆಸ್
ಆಗದ್ರೆ ಬಿಸಿಯೂಟ ನೌಕರರ ಬೇಡಿಕೆಗಳು ಏನು..!?
1] ಅಕ್ಷರ ದಾಸೋಹ ಯೋಜನೆ ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿ ನಡೆಯಬೇಕು
2] ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಗೆ ಬದಲಿಸಬೇಕು
3] ಎಸ್‌ಡಿಎಮ್‌ಸಿಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸಾಗಿ, ಖಾತೆ ಮೊದಲಿನಂತೆಯೇ ಬದಲಾಯಿಸಬೇಕು
4] ಕೆಲಸದಿಂದ ತೆಗೆದಿರುವ ಎಲ್ಲರಿಗೂ 1 ಲಕ್ಷ ಇಡಗಂಟು ಕೊಡಬೇಕು
5] ಇಡಿಗಂಟು ಕೊಡುವ ಬಗ್ಗೆ ಹಣಕಾಸು ಇಲಾಖೆಯಿಂದ ಒಪ್ಪಿಸಿ ಜಾರಿ ಮಾಡಬೇಕು
6] ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂ.ಗಳ ಪರಿಹಾರ ಕೊಡಬೇಕು
7] ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆ ಬದಲಿಸಬೇಕು.
8] ಬಜೆಟ್ ನಲ್ಲಿ ಹೇಳಿದ ಹತ್ತು ಸಾವಿರ ವೇತನ ಜನವರಿ 2023 ರಿಂದ ಅನ್ವಯ ಆಗುವಂತೆ ಜಾರಿ ಮಾಡಬೇಕು
9] ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ಕೂಡಲೇ ನಿಲ್ಲಬೇಕು
10] ಬಿಸಿಯೂಟ ಯೋಜನೆಯನ್ನು ಇಡೀ ರಾಜ್ಯದಲ್ಲಿ ಖಾಯಂ ಮಾಡಬೇಕು
11] 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಕಾರ್ಮಿಕರೆಂದು ಗುರುತಿಸಬೇಕು
12] ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಜವಾಬ್ದಾರಿ ಕೊಡಬಾರದು
14] ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು
15] ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು
16] ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು
17] ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೋಟದ ಕೆಲಸ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು
18] ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು
19] ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು
20] ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಲೇಬೇಕು
ಇದನ್ನೂ ಓದಿ- BJP vs Congress: ಕಾಂಗ್ರೆಸ್‍ನಲ್ಲಿ ಸರ್ವಾಧಿಕಾರಿ ಡಿ.ಕೆ.ಶಿವಕುಮಾರ್ ದರ್ಬಾರ್..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.