ಬಿಟ್ ಕಾಯಿನ್ ಪ್ರಕರಣ: 'ನಾನು ಸರಿಯಾದ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ'-ಡಿಕೆ ಶಿವಕುಮಾರ್

ಬಿಟ್ ಕಾಯಿನ್ ಪ್ರಕರಣವನ್ನು ಕಾಂಗ್ರೆಸ್ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ,'ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ, ನಾವೆಲ್ಲರೂ ಇಲ್ಲೇ ಇರುತ್ತೇವೆ. ನಾವು ನಿಮ್ಮಿಂದ ಸಾಧ್ಯವಾದಷ್ಟು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ. ಸಮಯ ಬಂದಾಗ ನಾವು ಆ ಬಗ್ಗೆ ಮಾತನಾಡುತ್ತೇವೆ' ಎಂದು ಉತ್ತರಿಸಿದರು.

Written by - Zee Kannada News Desk | Last Updated : Nov 14, 2021, 01:05 AM IST
  • ಬಿಟ್ ಕಾಯಿನ್ ಪ್ರಕರಣವನ್ನು ಕಾಂಗ್ರೆಸ್ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ,'ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ, ನಾವೆಲ್ಲರೂ ಇಲ್ಲೇ ಇರುತ್ತೇವೆ. ನಾವು ನಿಮ್ಮಿಂದ ಸಾಧ್ಯವಾದಷ್ಟು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ. ಸಮಯ ಬಂದಾಗ ನಾವು ಆ ಬಗ್ಗೆ ಮಾತನಾಡುತ್ತೇವೆ' ಎಂದು ಉತ್ತರಿಸಿದರು.
ಬಿಟ್ ಕಾಯಿನ್ ಪ್ರಕರಣ: 'ನಾನು ಸರಿಯಾದ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ'-ಡಿಕೆ ಶಿವಕುಮಾರ್  title=
file photo

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಕಾಂಗ್ರೆಸ್ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ,'ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ, ನಾವೆಲ್ಲರೂ ಇಲ್ಲೇ ಇರುತ್ತೇವೆ. ನಾವು ನಿಮ್ಮಿಂದ ಸಾಧ್ಯವಾದಷ್ಟು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ. ಸಮಯ ಬಂದಾಗ ನಾವು ಆ ಬಗ್ಗೆ ಮಾತನಾಡುತ್ತೇವೆ' ಎಂದು ಉತ್ತರಿಸಿದರು.

ಇದನ್ನೂ ಓದಿ: Gautam Gambhir: ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಭಾರತಕ್ಕೆ ಐಸಿಸಿ ಪ್ರಶಸ್ತಿ ಗೆಲ್ಲುತ್ತಾರೆ- ಗೌತಮ್ ಗಂಭೀರ್

ದಾಖಲೆ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದೀರಿ, ನಾವು ಕಾಯುತ್ತಿದ್ದೇವೆ ಎಂಬ ಪ್ರಸ್ತಾಪಕ್ಕೆ, ‘ಈ ಪ್ರಕರಣದ ವಿಚಾರವಾಗಿ ಒಂದೊಂದೇ ಮಾಹಿತಿ ಹೊರಬರುತ್ತಿದೆಯಲ್ಲ. ಸರ್ಕಾರ ತನ್ನ ನಿಲುವು ಬದಲಿಸಿದೆ. ಅವರು ಏನೆಲ್ಲ ವಶಪಡಿಸಿಕೊಂಡಿದ್ದಾರೋ ಈಗ ಅದರ ದಾಖಲೆಯೇ ಇಲ್ಲವೆಂದು ಮಾಹಿತಿ ತಿರುಚುತ್ತಿದ್ದಾರೆ ಎಂಬ ಮಾಧ್ಯಮ ವರದಿ ನೋಡಿದ್ದೇನೆ. ಅದರಲ್ಲೇ ನಿಮಗೆ ಉತ್ತರ ಸಿಗುತ್ತದೆ’ ಎಂದರು.

ಕಾಂಗ್ರೆಸ್ ನವರು ದಾಖಲೆ ಕೊಟ್ಟು ಮಾತನಾಡಲಿ ಎಂಬ ಬಿಜೆಪಿ ಹೇಳಿಕೆಗೆ, ‘ಮಾಹಿತಿ, ದಾಖಲೆಗಳನ್ನು ಜನರ ಮುಂದಿಡುವುದು ಸರ್ಕಾರದ ಕೆಲಸ. ಅವರು ಯಾವ ದಾಖಲೆ ಕೊಟ್ಟಿದ್ದಾರೋ ಅದರ ಆಧಾರದ ಮೇಲೆ ನಾವು ಮಾತನಾಡುತ್ತಿದ್ದೇವೆ. ನಾನು ನಿನ್ನೆ ಅದರ ಆಧಾರದ ಮೇಲೆ ಮಾತನಾಡಿದ್ದೇನೆ. ಈಗ ಅವರು ನಮ್ಮ ಬಳಿ ದಾಖಲೆ ಇಲ್ಲ ಎಂದು ಹೇಳುತ್ತಿದ್ದಾರೆ. ಪ್ರಕರಣದಲ್ಲಿ ದಾಖಲಾಗಿರುವ ಚಾರ್ಜ್ ಶೀಟ್ ದಾಖಲೆ ಕೇಳಿದ್ದೇನೆ. ನಿಮ್ಮ ಹೋಂವರ್ಕ್ ನಡೆದಂತೆ ನಮ್ಮದೂ ನಡೆಯುತ್ತಿದೆ’ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ವಿರುದ್ಧ ಇಡಿಯಿಂದ ಸಮನ್ಸ್ ಜಾರಿ

ಬಿಟ್ ಕಾಯಿನ್ ವಿಚಾರವನ್ನು ನಿರ್ಲಕ್ಷಿಸಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂಬುದಕ್ಕೆ, ‘ನಾನು ಸರಿಯಾದ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಕೆಪಿಸಿಸಿ ಸರಿಯಾದ ದಾಖಲೆ ಇದ್ದರೆ ಮಾತ್ರ ಮಾತನಾಡುತ್ತದೆ’ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News