ಬೆಂಗಳೂರು: ಬಿಟ್ ಕಾಯಿನ್(Bitcoin Scam) ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಉತ್ತಮ ಕೆಲಸ ಮುಂದುವರೆಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದರು. ಈಗ ಇದೇ ವಿಚಾರವಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.


COMMERCIAL BREAK
SCROLL TO CONTINUE READING

[[{"fid":"222102","view_mode":"default","fields":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"},"type":"media","field_deltas":{"1":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"}},"link_text":false,"attributes":{"alt":"Siddaramaiah","title":"Siddaramaiah","class":"media-element file-default","data-delta":"1"}}]]


‘ಬಿಟ್ ಕಾಯಿನ್ ಆರೋಪದ  ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ಮೋದಿಯವರು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?’ ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಆತ್ಮವಂಚಕ ದಲಿತ ವಿರೋಧಿ ಸಿದ್ದರಾಮಯ್ಯರ ಮಾತು ನಂಬಿಕೆಗೆ ಯೋಗ್ಯವೇ?: ಬಿಜೆಪಿ


[[{"fid":"222103","view_mode":"default","fields":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"},"type":"media","field_deltas":{"2":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"}},"link_text":false,"attributes":{"alt":"Siddaramaiah","title":"Siddaramaiah","class":"media-element file-default","data-delta":"2"}}]]


‘ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ್ ಬೊಮ್ಮಾಯಿ(Basavaraj Bommai) ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಪ್ರಧಾನಿ ಮೋದಿ(Narendra Modi)ಯವರು ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ?’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


‘ಬಿಟ್ ಕಾಯಿನ್ ಹಗರಣ(Bitcoin Scam)ದಲ್ಲಿ ಬಸವರಾಜ್ ಬೊಮ್ಮಾಯಿ ಭಾಗಿಯೋ  ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಠೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ?’ ಎಂದು ಪ್ರಶ್ನಿಸಿದ್ದಾರೆ.


[[{"fid":"222104","view_mode":"default","fields":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"},"type":"media","field_deltas":{"3":{"format":"default","field_file_image_alt_text[und][0][value]":"Siddaramaiah","field_file_image_title_text[und][0][value]":"Siddaramaiah"}},"link_text":false,"attributes":{"alt":"Siddaramaiah","title":"Siddaramaiah","class":"media-element file-default","data-delta":"3"}}]]


ಇದನ್ನೂ ಓದಿ: ಟಿಪ್ಪು ಮತಾಂಧ ಎನ್ನುವ ಬಿಜೆಪಿಯವರೇ ಟಿಪ್ಪು ಜಯಂತಿ ಮಾಡಿದ್ರು: ಸಿದ್ದರಾಮಯ್ಯ 


‘ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್(Congress) ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ಈ ಬಗ್ಗೆ ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ. ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.