ಸಂತೋಷ್ ಆತ್ಮಹತ್ಯೆ ಪ್ರಕರಣ 40% ಕಾಂಗ್ರೆಸ್ ಟೂಲ್ ಕಿಟ್ನ ಭಾಗ: ಬಿಜೆಪಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ #40PercentCONgressToolkit ಭಾಗ ಎಂಬುದಕ್ಕೆ ಹಲವಾರು ದೃಷ್ಟಾಂತಗಳಿವೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ.
‘ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು. ಮೃತ ಸಂತೋಷ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದೇ ವಿಷಯವಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ಇದು ಕಾಕತಾಳಿಯವಾಗಲು ಹೇಗೆ ಸಾಧ್ಯ?’ವೆಂದು ಬಿಜೆಪಿ ಪ್ರಶ್ನಿಸಿದೆ.
40% ಕಮಿಷನ್ ನಲ್ಲಿ ಸಿಎಂ ಬೊಮ್ಮಾಯಿ ಪಾಲುದಾರರಾ?- ಬಿ ಕೆ ಹರಿಪ್ರಸಾದ್ ವಾಗ್ದಾಳಿ
KS Eshwarappa: ಸಚಿವ ಈಶ್ವರಪ್ಪರನ್ನು ವಜಾಗೊಳಿಸಿ, ಬಂಧಿಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ
‘ಸಂತೋಷ್ ಪ್ರಕರಣ #40PercentCONgressToolkit ಭಾಗ ಎಂಬುದಕ್ಕೆ ಹಲವಾರು ದೃಷ್ಟಾಂತಗಳಿವೆ. ಸಂತೋಷ್ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತ, ಸಂತೋಷನಿಂದ ರಾಹುಲ್ ಗಾಂಧಿ ಸಹಿ ನಕಲು, 40% ಕಮಿಷನ್ ಕಾಂಗ್ರೆಸ್ ಸೃಷ್ಟಿ, ಸಂತೋಷ್ ಪಾಟೀಲನಿಂದಲೂ 40% ಕಮಿಷನ್ ಪ್ರಸ್ತಾಪ, ಕಾರ್ಯಾದೇಶ ಇಲ್ಲದೇ ಕಾಮಗಾರಿ, ಕೆಪಿಸಿಸಿ "ಅಘೋಷಿತ ಅಧ್ಯಕ್ಷೆಯ" ಕ್ಷೇತ್ರದಲ್ಲಿ ಕಾಮಗಾರಿ ಮತ್ತು ಈಗ ಮೃತನ ಪರ ಬ್ಯಾಟಿಂಗ್. ಮೃತ ವ್ಯಕ್ತಿಯ ಎಲ್ಲಾ ವಿಚಾರಗಳು "ಮಹಾನಾಯಕ" ಮತ್ತು "ಬೇನಾಮಿ ಅಧ್ಯಕ್ಷೆಯ" ಸುತ್ತ ಸುತ್ತುತ್ತಿರುವುದು ನಿಜವಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.