ಗದಗ : ದೇವ್ರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು(B Sriramulu), ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ವ್ಯವಸ್ಥೆ ಬಿಜೆಪಿ ಮಾಡುತ್ತೆ ಎಂದು ಹೇಳಿದರು.


ಇದನ್ನೂ ಓದಿ : ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌: ವಿಪಕ್ಷ ನಾಯಕ ಸಿದ್ದರಾಮಯ್ಯ


ನಂತರ ಕೆಎಸ್​​ಆರ್​ಟಿಸಿ(KSRTC) ಯಾವುದೇ ಆಸ್ತಿ ಅಡಮಾನ ಇಟ್ಟಿದೆ ಎಂಬ ಊಹಾಪೋಹ ಬಗ್ಗೆ ಮಾತನಾಡಿದ ಅವರು, ಕೆಎಸ್​​ಆರ್​ಟಿಸಿ ಯಾವುದೇ ಆಸ್ತಿ ಅಡಮಾನ ಇಟ್ಟಿಲ್ಲ. ಬೆಂಗಳೂರು ಶಾಂತಿ ನಗರ ಕಾಂಪ್ಲೆಕ್ಸ್, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ, ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಟ್ಟ ಹಣ ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ. ಇದು ಕಡಿಮೆ ದರದಲ್ಲಿ ಬಡ್ಡಿ ಇದ್ದ ಕಾರಣ ಆಸ್ತಿ ಅಡಮಾನ ಇಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.


ಸಿಬ್ಬಂದಿಗಳ ಇನ್ನೂ ಒಂದೂವರೆ ತಿಂಗಳ ಸಂಬಳ(Salary) ಮಾತ್ರ ಬಾಕಿ ಇದೆ. ಅದನ್ನು ಒಂದು ವಾರದೊಳಗೆ ಆ ಬಾಕಿ ಸಂಬಳ ನೀಡಿದ್ರೆ ಕ್ಲಿಯರ್ ಆಗುತ್ತೆ. ಮುಂದಿನ ತಿಂಗಳಿಂದ ಸಿಬ್ಬಂದಿ ನಿರಂತರವಾಗಿ ಸಂಬಳ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ಸಂಬಳ ನೀಡಲು ಕೊಟ್ಟಿದ್ದಾರೆ. ಇನ್ಮುಂದೆ ಚಾಲಕರ, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ ನಮ್ಮ ಇಲಾಖೆ ದಿವಾಳಿ ಆಗಿದೆ ಅಂತ ಹೇಳ್ತಾರಲ್ಲ. ಇದು ಲಾಭದಾಯಕ ಮಾಡುವ ಉದ್ದೇಶ ಅಲ್ಲ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ‘ಇನ್ನಾದರೂ ನಕಲಿ ಗಾಂಧಿ ಕುಟುಂಬ ಪೂಜಕರು ಬುದ್ದಿ ಕಲಿಯಬಹುದೇ?’


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.