ಬೆಂಗಳೂರು: ಪ್ರಜಾಧ್ವನಿ ಯಾತ್ರೆಯಲ್ಲಿನ ನಮಗೆ ಸಿಗುತ್ತಿರುವ ಜನ ಬೆಂಬಲದಿಂದ ಬಿಜೆಪಿ ಹಾಗೂ ದಳದವರಿಗೆ ಭೀತಿ ಎದುರಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂದು ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾನು, ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ.ಇದಾದ ನಂತರ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಲ್ಲಿಂದ ಹೊಸದುರ್ಗ, ಹೊಳಲ್ಕೆರೆ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳುತ್ತೇವೆ. ನಂತರ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದಕ್ಕಾಗಿ ಎರಡು ಮೂರು ದಿನ ವಿರಾಮ ಇರಲಿದೆ. ನಂತರ ಮಂಡ್ಯ, ಮೈಸೂರು ಜಿಲ್ಲೆಯ ಕ್ಷೇತ್ರಗಳಿಗೆ ಭೇಟಿ ನೀಡುತ್ತೇವೆ.
ಇದನ್ನೂ ಓದಿ : DA Hike : ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಸಿಹಿ ಸುದ್ದಿ : ನಿಮ್ಮ ಡಿಎ ಹೆಚ್ಚಾಗಲಿದೆ!
ಯಾತ್ರೆ ಕುರಿತು ಅನ್ಯ ಪಕ್ಷಗಳ ನಾಯಕರ ಟೀಕೆ ಬಗ್ಗೆ ಕೇಳಿದಾಗ, 'ಸಿದ್ದರಾಮಯ್ಯ ಅವರು ನಿರಂತರ ಪ್ರವಾಸ ವೇಳಾಪಟ್ಟಿ ನಿಗದಿ ಮಾಡಿಕೊಂಡಿದ್ದಾರೆ. ನಾವು ಇಲ್ಲಿ ಹತ್ತಿರದ ಕ್ಷೇತ್ರಗಳಿಗೆ ಬೆಂಗಳೂರಿನಿಂದ ತೆರಳುತ್ತಿದ್ದೇವೆ. ನಾವು ಎಲ್ಲೆ ಹೋದರು ನಮಗೆ ಜನರಿಂದ ಸಿಗುತ್ತಿರುವ ಬೆಂಬಲಕ್ಕೆ ಮಾಧ್ಯಮಗಳ ಕ್ಯಾಮೆರಾಗಳು ಸಾಕ್ಷಿ. ನಮಗೆ ಸಿಗುತ್ತಿರುವ ಜನ ಬೆಂಬಲದಿಂದ ಬಿಜೆಪಿ ಹಾಗೂ ದಳದವರಿಗೆ ಭೀತಿ ಎದುರಾಗಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡಿಕೊಂಡು ಬಂದಿದ್ದೇವೆ.
ಇದನ್ನೂ ಓದಿ : PF Rules : ಪಿಎಫ್ ಖಾತೆದಾರರ ಗಮನಕ್ಕೆ : ಖಾತೆಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿ
ಇತ್ತೀಚೆಗೆ ಬಿಜೆಪಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದೆ. ನಾವು ಈ ಯೋಜನೆಗೆ ಹಣ ನೀಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬಹುದಾಗಿತ್ತು. ಮೇಕೆದಾಟು ಯೋಜನೆಗೆ ಅನುಮತಿ ನೀಡಬಹುದಿತ್ತು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾನು ನಿನ್ನೆ ತಾಂತ್ರಿಕ ತಂಡದ ಜತೆ ಸಭೆ ಮಾಡಿದ್ದೇನೆ. ನಾವು ರೈತರನ್ನು ರಕ್ಷಿಸುವ ಕಾರ್ಯಕ್ರಮ ಮಾಡುತ್ತೇವೆ. ಯಡಿಯೂರಪ್ಪ ಸೇರಿದಂತೆ ಯಾರೇ ನಮ್ಮ ಯಾತ್ರೆ ಪಂಚರ್ ಆಗಲಿದೆ ಎಂದು ಹೇಳಲಿ. ಅಂತಿಮವಾಗಿ ಯಾರು ಪಂಚರ್ ಆಗಲಿದ್ದಾರೆ ಎಂದು ಮತದಾರರು ತೀರ್ಮಾನ ಮಾಡುತ್ತಾರೆ' ಎಂದು ತಿರುಗೇಟು ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.