ಬೆಂಗಳೂರು: ಕಾಂಗ್ರೆಸ್ ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಸ್ವಾರ್ಥಕ್ಕಾಗಿ ಪಾದಯಾತ್ರೆ ಮಾಡುತ್ತಿವೆ ಎಂದು ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ನೂರಾರು ಪಾದಯಾತ್ರೆಗಳಾಗಿವೆ. ಹೆಚ್ಚಿನ ಪಾದಯಾತ್ರೆಗಳು ನ್ಯಾಯದ ಪರವಾಗಿದ್ದವು. ಎಸ್ಎಮ್ ಕೃಷ್ಣ ಅವರ ಕಾಲದಲ್ಲಿ ಕಾವೇರಿ ನೀರಿಗಾಗಿ ಪಾದಯಾತ್ರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಗಣಿ ಲೂಟಿಯ ವಿರೋಧಿಸಿ ಪಾದಯಾತ್ರೆ. ಬಳ್ಳಾರಿಗೆ ಸಿಎಂ ಕೂಡ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದರು. ಯಡಿಯೂರಪ್ಪನವರು ಬಳ್ಳಾರಿಗೆ ಹೋದರೆ ಡಿಸಿ ಮತ್ತು ಎಸ್ಪಿ ಅವರೇ ಬರುತ್ತಿರಲಿಲ್ಲ. ಬಳ್ಳಾರಿ ರಿಪಬ್ಲಿಕ್ ವಿರೋಧಿಸಿ ನಾವು ಪಾದಯಾತ್ರೆ ಮಾಡಿ 2013ರಲ್ಲಿ ಸರ್ಕಾರ ರಚನೆ ಮಾಡಿದೆವು ಎಂದು ಹೇಳಿದರು.
ಕಾಂಗ್ರೆಸ್ ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಸ್ವಾರ್ಥಕ್ಕಾಗಿ ಪಾದಯಾತ್ರೆ ಮಾಡುತ್ತಿವೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿವೆ.ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತಾಳುತ್ತಿದೆ. ಇದರ ಬಗ್ಗೆಯೂ ನಾವು ಜನಜಾಗೃತಿ ಮಾಡುತ್ತಿದ್ದೇವೆ. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು ಶಾಸಕರು ಹಾಗೂ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಆದ ಆರ್ಥಿಕ ಅನ್ಯಾಯವನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದೆವು ಎಂದು ಟೀಕಾ ಪ್ರಹಾರ ನಡೆಸಿದರು.
ಇದನ್ನೂ ಓದಿ: ಕ್ರಿಕೆಟ್ ಇತಿಹಾಸದಲ್ಲಿ ಈ ವಿಶ್ವ ದಾಖಲೆಗಳನ್ನು ಮುರಿಯುವುದು ಅಸಾಧ್ಯ! ಭಾರತದ ದಿಗ್ಗಜರ ರೆಕಾರ್ಡ್ಸ್ ಕೂಡ ಈ ಪಟ್ಟಿಯಲ್ಲಿದೆ
ಕರ್ನಾಟಕದಿಂದ ಆಯ್ಕೆಯಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಕರ್ನಾಟಕಕ್ಕೆ ಬರಬೇಕಾದ ಹಣದ ಬಗ್ಗೆ ಮಾತನ್ನೆ ಆಡುತ್ತಿಲ್ಲ. ಕರ್ನಾಟಕದ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಇದರ ಬಗ್ಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ ಮಾಡಬೇಕೆ ಹೊರತು ಕಾಂಗ್ರೆಸ್ ಸರ್ಕಾರದ ವಿರುದ್ಧವಲ್ಲ. ಇಡೀ ದೇಶದಾದ್ಯಂತ ಎಲ್ಲೆಲ್ಲಿ ಇದರ ಪಕ್ಷಗಳು ಆಡಳಿತ ಮಾಡುತ್ತಿದ್ದಾವೇಯೋ ಅಲ್ಲೆಲ್ಲ ಇದೇ ರೀತಿಯ ಕೆಲಸವನ್ನು ಬಿಜೆಪಿ ಮಾಡುತ್ತಿದೆ.ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಆಪರೇಷನ್ ಕಮಲ ನಡೆಸಿ ಪ್ರಜಾಪ್ರಭುತ್ವದ ಕಗ್ಗುಲೆ ಮಾಡುತ್ತಿದೆ ಎಂದು ಕಿಡಿ ಕಾರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.