"ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ"-ಬಿ.ಕೆ.ಹರಿಪ್ರಸಾದ್ ಟೀಕೆ

ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ,ವೇಷ ಇದ್ದರೆ "ಶತೃರಾಷ್ಟ್ರ" ಎಂದು ಘೋಷಿಸಲಿ.! ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ.

Written by - Zee Kannada News Desk | Last Updated : Feb 28, 2024, 07:09 PM IST
  • ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲಾ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದ್ಯಾ?
  • ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ.
  • ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.
 "ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ"-ಬಿ.ಕೆ.ಹರಿಪ್ರಸಾದ್ ಟೀಕೆ  title=

ಬೆಂಗಳೂರು: ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ,ವೇಷ ಇದ್ದರೆ "ಶತೃರಾಷ್ಟ್ರ" ಎಂದು ಘೋಷಿಸಲಿ.! ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:  2 ಎಕರೆಯಲ್ಲಿ ಪೇರು ಹಣ್ಣು ಬೆಳೆದು 30 ಲಕ್ಷ ರೂ ಆದಾಯ: ನಿಡೋಣಿ ರೈತನ ಯಶೋಗಾಥೆ..!  

ಒಕ್ಕೂಟ ಭಾರತವನ್ನು ಇಬ್ಭಾಗ ಮಾಡಿದ ಮೊಹಮ್ಮದ್ ಅಲಿ ಜಿನ್ನಾಗೆ "ಜಾತ್ಯಾತೀತ ನಾಯಕ"ಎಂದು ಬಿರುದು ನೀಡಿ, ಸಮಾಧಿ ಎದುರು ಕಣ್ಣೀರು ಸುರಿಸಿದ ಲಾಲ್ ಕೃಷ್ಣ ಅಡ್ವಾನಿ ಯಾವ ಪಕ್ಷದವರು?ಭಯೋತ್ಪಾದನೆಗೆ ತಲೆ ಬಾಗುವುದಿಲ್ಲ ಎಂದು ಚುನಾವಣೆಯ ಭಾಷಣ ಬೀಗಿದ್ದ ನರೇಂದ್ರ ಮೋದಿಯವರು, ಪಾಕಿಸ್ತಾನದ ಪ್ರಧಾನಿಯ ಮೊಮ್ಮಗಳ ಮದುವೆಗೆ ಆಹ್ವಾನವೇ ಇಲ್ಲದೆ, ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕಾಲೇಜು ಅಡಳಿತ ಮಂಡಳಿಯಿಂದ ಹಿಂಸೆ ಆರೋಪ: ಆತ್ಮಹತ್ಯೆಗೆ ವಿದ್ಯಾರ್ಥಿ ಶರಣು

ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮಂಡಿಸಿದ್ದ ಖಾಸಗಿ ಮಸೂದೆಯನ್ನು ವಾಪಾಸ್ ಪಡೆದಿದ್ದು ಯಾಕೆ? 56 ಇಂಚಿನ ಎದೆಯಲ್ಲಿ ದೈರ್ಯವೇ ಇರಲಿಲ್ವೇ? ಯಾರ ಒತ್ತಡದಿಂದ ಮಸೂದೆ ವಾಪಾಸ್ ಪಡೆಯಲಾಯಿತು? ಎಂದು ಅವರು ಕುಟುಕಿದರು.

ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲಾ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದ್ಯಾ? ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ. ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News