By-election: ಸಿಂದಗಿ, ಹಾನಗಲ್ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು. 

Written by - Yashaswini V | Last Updated : Oct 7, 2021, 10:40 AM IST
  • ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
  • ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು
  • ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು
By-election: ಸಿಂದಗಿ, ಹಾನಗಲ್ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ title=
Karnataka Aassembly By-Elections

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಖಾಲಿಯಾಗಿರುವ ಸಿಂದಗಿಗೆ (Sindagi) ಹಾಗೂ ಹಾನಗಲ್ (Hanagal) ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ (BJP) ಇಂದು ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಸಿಂದಗಿ ಕ್ಷೇತ್ರದಿಂದ ಮಾಜಿ ಶಾಸಕ ರಮೇಶ್ ಭೂಸನೂರ ಹಾಗೂ ಹಾನಗಲ್ ಕ್ಷೇತ್ರದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವರಾಜ ಸಜ್ಜನ್ ಅವರಿಗೆ ಟಿಕೆಟ್ ನೀಡಲಾಗಿದೆ. 

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು. ಆ ಜಾಗಕ್ಕೆ ಅವರ ಕುಟುಂಬದವರಿಗೇ ಟಿಕೆಟ್ ನೀಡಲಾಗುತ್ತದೆ.‌ ಹಾನಗಲ್ ಕ್ಷೇತ್ರದಲ್ಲಿ ಸಂಸದ ಶಿವಕುಮಾರ ಉದಾಸಿ (MP Shivakuma Udasi) ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನ್ (Shivaraja Sajjan) ಅವರಿಗೆ ಟಿಕೆಟ್ ನೀಡಲಾಗಿದೆ. 

ಇದನ್ನೂ ಓದಿ- Mysuru Dasara: ಸಾಂಸ್ಕೃತಿಕ ನಗರಿಯಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು. ಆ ಜಾಗಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಟಿಕೆಟ್ ಕೊಟ್ಟಿದೆ. ಸಿಂಧಗಿ ಕ್ಷೇತ್ರದಲ್ಲಿ ಪಂಚಮಸಾಲಿ ಲಿಂಗಾಯತ ಮತಗಳು ನಿರ್ಣಾಯಕ ಆಗಿರುವುದರಿಂದ ಅದೇ ಸಮುದಾಯದ ರಮೇಶ್ ಭೂಸನೂರ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಅಕ್ಟೋಬರ್ 30ರಂದು ಮತದಾನ (Voting) ನಡೆಯಲಿದೆ. ನವೆಂಬರ್ 2ರಂದು ಫಲಿತಾಂಶ (Result) ಹೊರಬೀಳಲಿದೆ.

ಇದನ್ನೂ ಓದಿ- ತಾಲಿಬಾನಿಗಳಂತೆ ಬಿಜೆಪಿ ತಮ್ಮದೇ ಪ್ರತ್ಯೇಕ ಕಾನೂನುಗಳನ್ನು ಸೃಷ್ಟಿಸಿದೆಯೇ?: ಕಾಂಗ್ರೆಸ್

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ: ಕಾಂಗ್ರಿಸಿನಿಂದ ಮಾನೆ, ಮನಗೂಳಿ ಅಭ್ಯರ್ಥಿಗಳು:-
ಈಗಾಗಲೇ ಕಾಂಗ್ರೆಸ್ (Congress) ಕೂಡ ಈ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಿಂದಗಿಯಿಂದ ಅಶೋಕ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರದಿಂದ ಶ್ರೀನಿವಾಸ ವಿ ಮಾನೆ ಅವರ ಹೆಸರನ್ನು ಅಂತಿಮಗೊಳಿಸಿ ಎಐಸಿಸಿ ಆದೇಶ ಹೊರಡಿಸಿದೆ.

ಈ ಉಪಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗಳ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜೆಡಿಎಸ್ (JDS) ಈ ಉಪ‌ಚುನಾವಣೆಯಲ್ಲಿ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News