ಮೈತ್ರಿ ಸರ್ಕಾರದ ವಿರುದ್ಧ 2 ದಿನಗಳ ಬಿಜೆಪಿ ಅಹೋರಾತ್ರಿ ಧರಣಿ ಆರಂಭ

ಬೆಂಗಳೂರಿನ ಆನಂದ್‌ ರಾವ್‌ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಮಾರ್ಚನೆ ಮಾಡುವ ಮೂಲಕ ಧರಣಿಗೆ ಚಾಲನೆ ನೀಡಲಾಗಿದ್ದು, 100ಕ್ಕೂ ಅಧಿಕ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.  

Updated: Jun 14, 2019 , 02:06 PM IST
ಮೈತ್ರಿ ಸರ್ಕಾರದ ವಿರುದ್ಧ 2 ದಿನಗಳ ಬಿಜೆಪಿ ಅಹೋರಾತ್ರಿ ಧರಣಿ ಆರಂಭ

ಬೆಂಗಳೂರು: ಜಿಂದಾಲ್‌ಗೆ ಕಂಪನಿಗೆ 3,667 ಎಕರೆ ಭೂಮಿ ನೀಡುವ ಮೈತ್ರಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದಿನಿಂದ ಎರಡು ದಿನಗಳ ಕಾಲ ಬಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ. 

ಬೆಂಗಳೂರಿನ ಆನಂದ್‌ ರಾವ್‌ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಮಾರ್ಚನೆ ಮಾಡುವ ಮೂಲಕ ಧರಣಿಗೆ ಚಾಲನೆ ನೀಡಲಾಗಿದ್ದು, 100ಕ್ಕೂ ಅಧಿಕ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿದೆ.ಹಗರಣಗಳು ಕಣ್ಣೆದುರೇ ಇದ್ದರೂ ಸಿದ್ದರಾಮಯ್ಯ ಅವರು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಸಾಲ ಮನ್ನಾ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದ್ದು, ಬರನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಧರಣಿ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ನಾಯಕರಾದ ಆರ್‌.ಅಶೋಕ್‌, ಕೆ.ಎಸ್‌.ಈಶ್ವರಪ್ಪ, ಶ್ರೀರಾಮುಲು, ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ , ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ಧರಣಿಯಲ್ಲಿ ಭಾಗಿಯಾಗಿದ್ದಾರೆ.