ಡಿ.ಕೆ.ಶಿವಕುಮಾರ್,ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು

ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿದೆ. 

Written by - Ranjitha R K | Last Updated : Mar 27, 2024, 07:32 PM IST
  • ಡಿ.ಕೆ.ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು
  • ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪ
  • ಹೇಮಂತ್ ನಿಂಬಾಳ್ಕರ್ ವಿರುದ್ದವೂ ದೂರು
ಡಿ.ಕೆ.ಶಿವಕುಮಾರ್,ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು title=

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ,ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಈ ಹಿನ್ನೆಲೆಯಲ್ಲಿ ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿದೆ. 

ಡಿಕೆಶಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು  ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಎಚ್.ಎನ್. ಚಂದ್ರಶೇಖರ್, ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್  ದೂರೂ ಸಲ್ಲಿಸಿದ್ದಾರೆ. 

ಇದನ್ನೂ ಓದಿ : ಸಬ್‌ ಕಾ ಸಥ್‌, ಸಬ್‌ ಕಾ ವಿಕಾಸ್‌ ಅಂತ ಹೇಳಿ ಬುರ್ಖಾ, ಗಡ್ಡ, ಶಿಲುಬೆ ಹಾಕಿದವರನ್ನ ಹೊರಗಿಡ್ತಾರೆ : ಸಿಎಂ

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಮೀಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡುವಂತೆ  ಕೋರಲಾಗಿದೆ. ಅವರು ತಮ್ಮ ಕಚೇರಿಯನ್ನು ಬಳಸಿಕೊಂಡು ಪತ್ನಿ, ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಅಲ್ಲಿಂದ ವರ್ಗಾವಣೆ ಮಾಡುವಂತೆ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದ್ದಾರೆ. 

ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ನೀಡುವಂತೆ ವಿನಂತಿಸಿದ್ದಾರೆ. ಚುನಾವಣಾ ವೇಳಾಪಟ್ಟಿ ನಾಳೆಯಿಂದ ಆರಂಭವಾಗಲಿದ್ದು, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಕಮೀಷನರ್ ಹೇಳಿರುವುದಾಗಿ ತಿಳಿಸಿದ್ದಾರೆ. 

ಇದನ್ನೂ ಓದಿ : ಕ್ಷೇತ್ರದ ಜನರಿಂದ ಉತ್ತಮ ಸ್ಪಂದನೆ, ನಾಳೆ ನಾಮಪತ್ರ ಸಲ್ಲಿಕೆ : ಡಿ.ಕೆ. ಸುರೇಶ್

ರಾಜ್ಯ ಸರಕಾರದ ಕೆಲವು ಸಚಿವರು ತಮ್ಮ ಅಧಿಕೃತ ಕಚೇರಿಗಳನ್ನು ಲೋಕಸಭಾ ಚುನಾವಣಾ ಕೆಲಸಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವ ಸಂಬಂಧ ಇನ್ನೊಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ. ಬಿಜೆಪಿ ಚುನಾವಣಾ ಬೋನಸ್ ಕುರಿತಂತೆ ವಾಟ್ಸ್ ಆಪ್ ನಕಲಿ ಸಂದೇಶದ ಕುರಿತು ಮತ್ತೊಂದು ದೂರು ಕೊಡಲಾಗಿದ್ದು, ಕ್ರಮ ಕೈಗೊಳ್ಳಲು ಕೋರಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News