Mekedatu yojane:  ಮೇಕೆದಾಟು ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂಬ ಡಿಎಂಕೆ ನಾಯಕರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಕ್ರಿಯೆ ಏನು ಎಂಬುದನ್ನು ಕಾದು ನೋಡಬೇಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ  ಅವರು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ತಡೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲೇ ಹೇಳಿದೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ನಿಲುವೇನು? 
ಕಾಂಗ್ರೇಸ್ ಇಂಡಿಯಾ ಒಕ್ಕೂಟದಿಂದ ಡಿಎಂಕೆಯನ್ನು ಕೈ ಬಿಡುತ್ತದೆಯೇ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.


ಮೇಕೆದಾಟು ಸಂಬಂಧ ನಮ್ಮ ನೀರು ನಮ್ಮ ಹಕ್ಕು ಎನ್ನುತ್ತ ಕಾಂಗ್ರೆಸ್ ಪಕ್ಷ ಈ ಹಿಂದೆ ದಿಲ್ಲಿ ಪಾದಯಾತ್ರೆ ನಡೆಸಿತ್ತು. ಕೋವಿಡ್ ಸಂದರ್ಭದಲ್ಲಿ ಕೋರ್ಟ್ ಸೂಚನೆ ಇದ್ದರೂ ನಿಯಮ ಧಿಕ್ಕರಿಸಿ ಪ್ರತಿಭಟನೆ ನಡೆಸಿತ್ತು. ಈಗ ಅದರ ಅಂಗ ಪಕ್ಷ ಡಿಎಂಕೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ತಡೆ ಎಂದು ಪ್ರಣಾಳಿಕೆಯಲ್ಲೇ ಹೇಳಿದೆ. ಕಾಂಗ್ರೆಸ್ ಈಗ ಯಾವ ನಿಲುವು ತಗೆದುಕೊಳ್ಳುತ್ತದೆ? ಎಂದು ಜೋಶಿ ಪ್ರಶ್ನಿಸಿದರು. 


ಇದನ್ನೂ ಓದಿ- Lok Sabha Election 2024: ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ, ಕಲಬುರ್ಗಿಯಿಂದ ರಾಧಾಕೃಷ್ಣ ಕಣಕ್ಕೆ 


ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಜೋಶಿ, ಕೇಜ್ರಿವಾಲ್ ದುರಹಂಕಾರದಿಂದ ಸಮನ್ಸ್ಗಳಿಗೆ ಉತ್ತರಿಸಿಲ್ಲ. ಹೀಗಾಗಿ ಅವರ ಬಂಧನವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದರು.


ಇದನ್ನೂ ಓದಿ- Lok Sabha Election 2024: ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ


ಈ ಸಂದರ್ಭದಲ್ಲಿ ಕೆಲ ಕಾಂಗ್ರೆಸ್ ನಾಯಕರ ಬ್ಯಾಂಕ್ ಖಾತೆ ಸೀಜ್ ಆಗಿರುಯ ಬಗ್ಗೆಯೂ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಷಿ,  ಕಾಂಗ್ರೆಸ್‌ನವರು ತೆರಿಗೆ ಕಟ್ಟಿಲ್ಲ, ಹೀಗಾಗಿ ಕೆಲ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಆದಾಯ ತೆರಿಗೆ ಸಂಬಂಧಿತ ವಿಷಯದಲ್ಲಿ ಕೆಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ಪಕ್ಷವನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ. ಜನರೇ ಶಕ್ತಿಹೀನಗೊಳಿಸಿದ್ದಾರೆ ಎಂದು ಹೇಳಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.