ಬೆಂಗಳೂರು : ರಾಜ್ಯ ವಿಧಾನಸಭೆ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೋರ್ ಕಮಿಟಿ ಸಭೆ ಕರೆದಿದ್ದಾರೆ.
ಇಂದು ಬೆಳಿಗ್ಗೆ ೧೦ ಗಂಟೆಗೆ ಭೆ ನಿಗದಿಯಾಗಿದ್ದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನವಕರ್ನಾಟಕ ಪರಿವರ್ತನಾ ಯಾತ್ರೆಯ ಬಾಕಿ ಕ್ಷೇತ್ರಗಳ ರೂಪುರೇಷೆ ಸೇರಿದಂತೆ ಯಾತ್ರೆಯಲ್ಲಿ ಸಿಕ್ಕಿರುವ ಜನರ ವಿಶ್ವಾಸದ ಬಗ್ಗೆ ಬಿಜೆಪಿ ನಾಯಕರು ಚರ್ಚೆ ಮಾಡಲಿದ್ದಾರೆ.
ಇನ್ನೂ, ವಿಧಾನಸಭೆ ಕಲಾಪದಲ್ಲಿ ಶಾಸಕ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯುವಲ್ಲಿ ಬಿಜೆಪಿ ಎಡವಿದ್ದೆಲ್ಲಿ ಹಾಗೂ ಸಚಿವ ಕುಲಕರ್ಣಿ ವಿರುದ್ಧ ಹೋರಾಟಕ್ಕಾಗಿ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಕುರಿತು ನಾಯಕರು ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.