ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಕ್ಷದವರು ಎಲ್ಲ ವರ್ಗದವರಿಗೆ ಮೀಸಲಾತಿ ಕೊಡಲಾಗುವುದು ಎಂದು ಹೇಳಿ ಚಾಕಲೇಟ್ ಹಂಚಿಕೆ ಮಾಡಿದ ಹಾಗೇ ಮಾಡಿ ಹೋದರು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಸಿ.ಮಹದೇವಪ್ಪ ಗಂಭೀರ ಸ್ವರೂಪದ ಆರೋಪ ಮಾಡಿದರು.


COMMERCIAL BREAK
SCROLL TO CONTINUE READING

ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದರು ಸಮಾಜ ಕಲ್ಯಾಣ ಸಚಿವ ಎಚ್. ಸಿ.ಮಹದೇವಪ್ಪ, ಡಾ.ಸದಾಶಿವ ಆಯೋಗ ಜಾರಿ ವಿಚಾರ ಕುರಿತು ಮಾತನಾಡುತ್ತಾ ಡಾ. ಸದಾಶಿವ ಆಯೋಗ ವರದಿ ಜಾರಿ ಮಾಡುವುದು ನಮ್ಮ ಆದ್ಯ ಕರ್ತವ್ಯ.  ಡಾ.ಸದಾಶಿವ ವರದಿ ಜಾರಿ ಮಾಡುವುದು 2-3 ದಶಕಗಳ ಕಾಲದ್ದು ಈಗಿನದು ಅಲ್ಲಾ. ಭಾರತೀಯ ಜನತಾ ಪಕ್ಷದವರು ಡಾ. ಸದಾಶಿವ ಆಯೋಗ ವರದಿ ತಿರಸ್ಕಾರ ಮಾಡಿದ್ದಾರೆ ಅವರು ಮೀಸಲಾತಿ ವಿಚಾರದಲ್ಲಿ ಕಾಟಾಚಾರಕ್ಕೆ ಮೀಸಲಾತಿ ಜಾರಿ ಮಾಡಿದ್ದಾರೆ  ನಾವು ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಿದ್ದೇವೆ. 


ಇದನ್ನೂ ಓದಿ- ಜಯನಗರ ಕಾಂಪ್ಲೆಕ್ಸ್ ಮಾತ್ರವೇ ಜನ ಇಲ್ಲಿಗೆ ಬರುವುದಿಲ್ಲ


ಈ ಕುರಿತು ಚಿತ್ರದುರ್ಗದ ಸಮಾವೇಶದಲ್ಲಿ ಡಾ.‌ಸದಾಶಿವ ಆಯೋಗ ವರದಿ ಯಥಾವತ್ತಾಗಿ ಜಾರಿ ಮಾಡುತ್ತೇವೆ ಅಂತಾ ಮಾತುಕೊಟ್ಟಿದ್ದೆವು. ಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಅಂತಾ ಹೇಳಿದ್ದವು. ಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಏಳು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ಆಗಿದ್ದು  ಮೀಸಲಾತಿ ಜಾರಿ ವಿಚಾರದಲ್ಲಿ ಕಾನೂನು ಸಲಹೆ ಅಗತ್ಯವಾಗಿದ್ದು ಕಾನೂನು, ಸಂವಿಧಾನದ ವ್ಯಾಪ್ತಿಯಲ್ಲಿ ಚರ್ಚೆ ಆಗಬೇಕು. 


ಈ ಕುರಿತು ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು, ಕಾನೂನು ತಜ್ಞರು ಹಿರಿಯರ ಜೊತೆಗೆ ಚರ್ಚೆ ಮಾಡಬೇಕಾಗಿದೆ. ಯಾವುದೇ ರೀತಿಯ ತೊಡಕುಗಳು ಆಗದಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಈ ಕುರಿತು ಓಪನ್ ಮೈಂಡೆಡ್ ಆಗಿ ಯೋಚಿಸಬೇಕು.  ಯಾವುದೇ ರೀತಿಯ ಅನುಮಾನ ಬೇಡಾ ಸದಾಶಿವ ಆಯೋಗ ವರದಿ ಜಾರಿ ಮಾಡಿಯೇ ಮಾಡುತ್ತೇವೆ. 


ಡಾ. ಸದಾಶಿವ ಆಯೋಗ ಜಾರಿಯಲ್ಲಿ ಶಾಸಕರ ಮನೆ ಮುಂದೆ ಒತ್ತಾಯ ಮಾಡಿ ಪ್ರತಿಭಟನೆಗೆ ಸಚಿವ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುನಿಯಪ್ಪನವರು ನಮ್ಮ ಹಿರಿಯ ನಾಯಕರು. ಅವರು ಯಾವ ಆಧಾರದ ಮೇಲೆ ಹಾಗೂ ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನೋಡೋಣ ಆ ಕುರಿತು ಮಾತನಾಡುವೆ ಎಂದರು. 


ಇದನ್ನೂ ಓದಿ- ಇಂದು ಮೈಸೂರ್ ಜಿಲ್ಲೆಯಲ್ಲಿ ಬಿಎಪಿ ಬರ ಅಧ್ಯಯನ


ಇನ್ನು ಆಪರೇಷನ್ ಹಸ್ತಕ್ಕೆ ಹೆದರಿ ಜಾತ್ಯಾತೀತ ಜನತಾದಳ ಶಾಸಕರ ರೆಸಾರ್ಟ್ ನಲ್ಲಿ ಸಭೆ ವಿಚಾರ ಕುರಿತು ಸಹ ಮಾತನಾಡಿದ ಅವರು, ಜೆ‌ಡಿ‌ಎಸ್ ನವರು ಸಭೆ ಮಾಡುವುದು ಹೊಸದೇನಲ್ಲ, ಮಾಡಲಿ ಬಿಡಿ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.