ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ವಾರದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಭ್ರಷ್ಟಾಚಾರದ ಆರೋಪದ ಮೇರೆಗೆ ಜೈಲಿಗೆ ಹೋಗಿ ಬಂದಿದ್ದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗೃಹ ಸಚಿವರಾಗಿದ್ದಾಗ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದವರು.ಇವರಿಗೆ ತಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮಿತ್ ಷಾ ಮತ್ತು ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದರು.


COMMERCIAL BREAK
SCROLL TO CONTINUE READING

ಜಿಲ್ಲೆಯ ಸೂಳೆಬಾವಿ ಗ್ರಾಮದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಅಮಿತ್ ಷಾ ಮತ್ತು ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದವರು. ಇವರು ನಮ್ಮ ವಿರುದ್ದ ಚಾರ್ಜ್ ಶೀಟ್ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಇವರಿಗೆ ಮಾನ-ಮರ್ಯಾದೆ ಇದೆಯಾ? ನೈತಿಕತೆ ಇದೆಯಾ ? ಎಂದು ವಾಗ್ದಾಳಿ ನಡೆಸಿದ್ದಾರೆ.


4 ವರ್ಷ 4 ತಿಂಗಳಿನಲ್ಲಿ ನಾವು ಜನತೆಗೆ ಕೊಟ್ಟ ಎಲ್ಲಾ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಜೊತೆಗೆ ಒಂದೇ ಒಂದು ಹಗರಣವನ್ನೂ ನಮ್ಮ ಸರ್ಕಾರ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.