ಇಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ ಬಿಜೆಪಿಯ ಮೊದಲ ಚುನಾವಣಾ ನಿರ್ವಹಣಾ ಸಮಿತಿ ಸಭೆ.

Last Updated : Mar 24, 2018, 12:08 PM IST
ಇಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ title=

ಬೆಂಗಳೂರು: ಮಾರ್ಚ್ 28 ರಂದು ಕೇಂದ್ರ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು(ಮಾರ್ಚ್ 24) ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಕರೆದಿದೆ.

ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮೊದಲ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆ ಸಿದ್ದತೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಬಿಜೆಪಿ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಂಸದೆ ಶೋಭಾ ಕರಂದ್ಲಾಜೆ, ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಿಂಬಾವಳಿ, ಸಿ.ಟಿ ರವಿ, ರವಿ ಕುಮಾರ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

Trending News