ಶಾಸಕರಾದ ಎಸ್. ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಪಕ್ಷ ವಿರೋಧಿ ಚಟುವಟಿಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕರಾದ ಎಸ್ ತಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.   

Written by - Ranjitha R K | Last Updated : May 27, 2025, 03:11 PM IST
  • ಇಬ್ಬರು ಶಾಸಕರನ್ನು ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕದಿಂದ ಉಚ್ಚಾಟಿನೆ
  • ಮಾರ್ಚ್ 25 ರಂದು ಶಾಸಕರಿಗೆ ಶೋಕಾಸ್ ನೋಟಿಸ್
  • ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಉಚ್ಚಾಟನೆ
ಶಾಸಕರಾದ ಎಸ್. ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನು ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕವು ಉಚ್ಚಾಟಿಸಿದೆ. ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

Add Zee News as a Preferred Source

ಪದೇ ಪದೇ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಮತ್ತು ಕರ್ನಾಟಕದಲ್ಲಿ ಆಡಳಿತ ಪಕ್ಷಕ್ಕೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 

ಇದನ್ನೂ ಓದಿ : 1.5 ಎಕರೆ ಜಮೀನಿನಲ್ಲಿ ಸಾವಯವ ಕೃಷಿ ಮೂಲಕ ಆರೋಗ್ಯಯುತ ಜೀವನ; ಎಲ್ಲರಿಗೂ ಮಾದರಿಯಾದ ಧಾರವಾಡದ ರೈತ ಕೆ.ವ್ಹಿ.ಹುಲಕೋಟಿ

ಬಿಜೆಪಿಯ ಕರ್ನಾಟಕ ಘಟಕವು ಮಾರ್ಚ್ 25 ರಂದು ಶಾಸಕರಿಗೆ ಶೋಕಾಸ್ ನೋಟಿಸ್ ನೀಡಿದ್ದು, "ಪಕ್ಷದ ಶಿಸ್ತಿನ ಪುನರಾವರ್ತಿತ ಉಲ್ಲಂಘನೆ" ಕುರಿತು ಅವರ ಪ್ರತಿಕ್ರಿಯೆಯನ್ನು ಪರಿಗಣಿಸಲಾಗಿದೆ ಎಂದು ಹೇಳಿದೆ. ಆದ್ದರಿಂದ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಜೊತೆಗೆ ಪಕ್ಷದ ಹುದ್ದೆಯಿಂದ ತೆಗೆದುಹಾಕಲಾಗುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇನ್ನು ಈ ಬಗ್ಗೆ ಮಾತನಾಡಿದ ಬಿ ವೈ ವಿಜಯೇಂದ್ರ,ಇಬ್ಬರೂ ಪಕ್ಷ ವಿರೋಧಿ ಕೆಲಸ ಮಾಡಿದ್ದರು. ಇವರ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದೆವು. ಈ ಹಿನ್ನೆಲೆಯಲ್ಲಿ ಶಿವರಾಮ ಹೆಬ್ಬಾರ್  ಹಾಗೂ ಎಸ್ಟಿ ಸೋಮಶೇಖರ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯ ಆರ್ಭಟ; ಬಂಟ್ವಾಳ ತಾಲೂಕಿನಾದ್ಯಂತ ಮಳೆ ಅಬ್ಬರಕ್ಕೆ ಜನಜೀನವ ಅಸ್ತವ್ಯಸ್ತ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News