ಹುಬ್ಬಳ್ಳಿ: ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಶಾಪವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ(KPCC President) ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾನುವಾರ(ಆಗಸ್ಟ್ 29) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀಡಿರುವ ಯಾವುದೇ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿ ಸಚಿವರು, ಸಂಸದರು ದಿನಕ್ಕೊಂದು ಹೇಳಿಕೆ ನೀಡುತ್ತಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ರಾಜ್ಯದ ಜನತೆಗೆ ಬಿಜೆಪಿ ಸರ್ಕಾರ ಶಾಪವಾಗಿದೆ ಅಂತಾ ಗುಡುಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಡಿಕೆಶಿ(DK Shivakumar), ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸರ್ಕಾರ ಏನೂ ಮಾಡಿಲ್ಲ ಎಂದು ಆರೋಪಿಸಿದರು. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಬೆಡ್ಗೂ ಕ್ಯೂ ನಿಲ್ಲಿಸಿದರು, ಆ್ಯಂಬುಲೆನ್ಸ್ಗೂ ಕ್ಯೂ ನಿಲ್ಲಿಸಿದರು. ಬಿಜೆಪಿಯಲ್ಲಿ ಎಲ್ಲಾ ಚೆನ್ನಾಗಿದ್ದರೂ ಸಿಎಂ ಬದಲಾವಣೆ ಯಾಕಾಯ್ತು ಅಂತಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ: ಸುತ್ತೋಲೆ ವಾಪಸ್ ಪಡೆಯಲು ಆದೇಶ
ಮುಖ್ಯಮಂತ್ರಿ ಸ್ಥಾನದಿಂದ ಕಳೆಗಿಳಿದು ಅಧಿಕಾರ ತ್ಯಾಗ ಮಾಡಬೇಕಾದರೆ ಬಿ.ಎಸ್.ಯಡಿಯೂರಪ್ಪನವರು ಕಣ್ಣೀರು ಹಾಕಿದರು. ಅವರು ಏಕೆ ಕಣ್ಣೀರು ಹಾಕಿದರು ಅನ್ನೋದು ನಮಗೆ ಗೊತ್ತಿದೆ ಅಂತಾ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಕೋವಿಡ್-19(COVID-19) ಹೆಸರಿನಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಕೋಟಿ ಕೋಟಿ ರೂ. ಲೂಟಿ ಹೊಡೆಯಲಾಗಿದೆ. ಎಲ್ಲವೂ ಸರಿಯಾಗಿದ್ದರೆ ಬಿ.ಎಸ್.ಯಡಿಯೂರಪ್ಪ(BS Yediyurappa)ನವರನ್ನು ಸಿಎಂ ಸ್ಥಾನದಿಂದ ಏಕೆ ಕೆಳಗಿಳಿಸಬೇಕಾಗಿತ್ತು. ನಾಯಕತ್ವ ಬದಲಾವಣೆ ಮಾಡಿ ಬೇರೆಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಏಕೆ ತಂದು ಕೂರಿಸಬೇಕಾಗಿತ್ತು..? ಬಿಜೆಪಿ ಪಕ್ಷದಲ್ಲಿ ಏನೋ ಗಂಭೀರ ಸಮಸ್ಯೆಯಾಗಿರಬೇಕಲ್ವಾ..? ಅದಕ್ಕೆ ಸಿಎಂ ಬದಲಾವಣೆ ಮಾಡಿರಬೇಕಲ್ವಾ..? ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ(BJP Govt.)ದ ಭ್ರಷ್ಟಾಚಾರದಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಅವರು ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಮತ ನೀಡುವ ಮೂಲಕ ಬೆಂಬಲಿಸಬೇಕು. ಬಿಜೆಪಿ ಸರ್ಕಾರದಿಂದ ದಿಕ್ಕೆಟ್ಟಿರುವ ಮತದಾರರು ಕಾಂಗ್ರೆಸ್ ಕೈಹಿಡಿಯಬೇಕು. ನಮ್ಮ ಪಕ್ಷವು ಸುಭದ್ರ ಮತ್ತು ಸ್ವಚ್ಛ ಆಡಳಿತವನ್ನು ನೀಡುತ್ತದೆ ಅಂತಾ ಡಿಕೆಶಿ ಭರವಸೆ ನೀಡಿದರು.
ಇದನ್ನೂ ಓದಿ: ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಂಜೆ ಹೆಣ್ಣುಮಕ್ಕಳ ಪ್ರವೇಶಕ್ಕೆ ನಿಷೇಧ..!
ಹುಬ್ಬಳ್ಳಿ ಪ್ರವಾಸದಲ್ಲಿರುವ ಡಿಕೆಶಿ ಟೆಂಪಲ್ ರನ್ ನಡೆಸಿದ್ದಾರೆ. ಪ್ರಖ್ಯಾತ ಸಿದ್ದಾರೂಢ ಮಠ ಮತ್ತು ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಸೈದ ಫತೇಶಾವಲಿ ದರ್ಗಾಕ್ಕೂ ಭೇಟಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.