ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಎಲ್ಲಾ ಸಮುದಾಯಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ನೆಲಮಂಗಲ: ಸಾಮಾಜಿಕ ಸಭೆಗಳಲ್ಲಿ ರಾಜಕೀಯದವರು ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಾರೆ. ಆದರೆ, ನಾನು ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳುವುದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದಲ್ಲಿ ಆಯೋಜಿಸಿದ್ದ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮೀಜಿಯವರ 33ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದನ್ನೂ ಓದಿ: ಮೋದಿಯವರು ‘ಪ್ರಧಾನಮಂತ್ರಿ ಸೌದೆ ಯೋಜನೆ’ ಘೋಷಿಸಿದರೂ ಆಶ್ಚರ್ಯವಿಲ್ಲ!: ಕಾಂಗ್ರೆಸ್ ವ್ಯಂಗ್ಯ
ನಾವು ರಾಜ್ಯದಲ್ಲಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸಮುದಾಯಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಲಿದೆ. ಪ್ರತಿಯೊಬ್ಬರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಸಿಎಂ ತಿಳಿಸಿದರು.
ಈಗಿನ ಕಾಲದಲ್ಲಿ ಯಾರಿಗೂ ಮೋಸ ಮಾಡಲು ಸಾಧ್ಯವಿಲ್ಲ. ಅಧಿಕಾರದಲ್ಲಿದ್ದಾಗ ಯಾರು ಎಷ್ಟು ಕೆಲಸ ಮಾಡಿದರು ಎಂದು ಎಲ್ಲರಿಗೂ ತಿಳಿದಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಬಾದಾಮಿ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಿದ್ದರಾಮಯ್ಯಗೆ ಎಚ್‌ಡಿಕೆ ಟಕ್ಕರ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.