`ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ`
ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
"ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್ - ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿ.ಐ - ಸಿ.ಎಫ್.ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.ಇಲ್ಲಿಯ ವರೆಗೆ ಇವರ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು? ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ: ಗಾನಕೋಗಿಲೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ
"ಗೃಹಸಚಿವ ಆರಗ ಜ್ಞಾನೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್ - ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ.ಶಿಕ್ಷಣ ಸಚಿವರಿಗೆ ಸಿ.ಎಫ್.ಐ ಮೇಲೆ ಶಂಕೆಯಂತೆ.ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು.ಎಸ್.ಡಿ.ಪಿ.ಐ ಯೋ, ಸಿ.ಎಫ್.ಐ ಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ" ಎಂದು ಹೇಳಿದರು.
'ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯ ವರೆಗೆ ಕಾಯೋಣ.ಆದರೆ ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ,ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಇವೆಲ್ಲವೂ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಎಂದು ಸಿದ್ಧರಾಮಯ್ಯ ಹೇಳಿದರು.
ಇದನ್ನೂ ಓದಿ: ಬೆಳ್ಳನೆ ಬೆಳಗಾಯಿತು' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಲತಾ ಮಂಗೇಶ್ಕರ್..
ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ.ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಎಂದು ಅವರು ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.