ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ-ಸಿದ್ದರಾಮಯ್ಯ

ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Last Updated : Aug 5, 2022, 03:22 PM IST
  • ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ' ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌
  • ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.
ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ-ಸಿದ್ದರಾಮಯ್ಯ  title=
file photo

ಬೆಂಗಳೂರು: ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ' ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಇದನ್ನೂ ಓದಿ: ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ.ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಹೊಸಪೇಟೆಯಲ್ಲಿ 7.04 ಅಡಿ ಎತ್ತರದ 'ಅಪ್ಪು' ಕಂಚಿನ ಪುತ್ಥಳಿ ಪ್ರತಿಷ್ಠಾಪನೆ!

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು?
ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು 'ಉತ್ತರ ಕುಮಾರ'ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಎಂದು ಪ್ರಶ್ನಿಸಿದರು.

ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News