ಬೆಂಗಳೂರು: ರೈತರ ಸರ್ಕಾರ ಎಂದು ಹೇಳಿ ಬಿಜೆಪಿ ರೈತರಿಗೆ ಟೋಪಿ ಹಾಕುವ ಕೆಲಸ ಮಾಡಬಾರದು ಎಂದು ಸಿದ್ಧರಾಮಯ್ಯ ಆಡಳಿತ ಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ನಾಶವಾಗಿವೆ, ಆದ್ದರಿಂದ ರೈತರಿಗೆ ಸರ್ಕಾರವು ನೆರವಾಗಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು."ಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಜಮೀನುಗಳಿಗೆ ಇಂದು ಭೇಟಿ ನೀಡಿ, ಸಂಕಷ್ಟದಲ್ಲಿರುವ ರೈತರ ಕಷ್ಟನಷ್ಟಗಳನ್ನು ಆಲಿಸಿದ್ದೇನೆ" ಎಂದು ಹೇಳಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ನಿರ್ಧಾರ : ಕೃಷಿ ಕಾನೂನು ಹಿಂಪಡೆಯಲು ಸಂಪುಟ ಅನುಮೋದನೆ!


ನಿರಂತರ ಸುರಿದ ಮಳೆಯಿಂದಾಗಿ ರೈತರ ಬೆಳೆಯಲ್ಲಿ ಶೇ.60 ರಷ್ಟು ನಷ್ಟವಾಗಿದೆ. ಲಕ್ಷಾಂತರ ರೂಪಾಯಿ ಸಾಲಮಾಡಿ ರೈತರು ಕಲ್ಕತ್ತಾದಿಂದ ಹೂಗಿಡಗಳನ್ನು ತರಿಸಿ ಹೊಲದಲ್ಲಿ ಹಾಕಿದ್ದರು. ಮಳೆಯಿಂದಾಗಿ ಬೆಳೆಪೂರ್ತಿ ಕೊಚ್ಚಿಹೋಗಿದೆ. 
ಕಳೆದ 25 ದಿನಗಳಿಂದ ಮಳೆಯಾಗುತ್ತಿದ್ದು ಬೆಳೆ ನಾಶವಾಗಿದೆ. ಸರ್ಕಾರ ಈಗಾಗಲೇ ಬೆಳೆನಷ್ಟದ ಸಮೀಕ್ಷೆ ಮಾಡಿಸಬೇಕಿತ್ತು, ಜಿಲ್ಲಾ ಉಸ್ತುವಾರಿ ಸಚಿವರು, ಮಂತ್ರಿಗಳು ರೈತರ ಸಂಕಷ್ಟ ಆಲಿಸಬೇಕಿತ್ತು.ಇದ್ಯಾವುದನ್ನೂ ಸರ್ಕಾರ ಮಾಡಿಲ್ಲ" ಎಂದು ಅವರು ಟೀಕಿಸಿದರು.


ಇನ್ನೂ ತಡಮಾಡದೆ ರಾಜ್ಯ ಸರ್ಕಾರ ತಕ್ಷಣ ಬೆಳೆನಷ್ಟದ ಸಮೀಕ್ಷೆ ಮಾಡಿ, ರೈತರಿಗೆ ಪರಿಹಾರದ ಹಣ ನೀಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ" ಎಂದು ಆಗ್ರಹಿಸಿದರು.


ಇದನ್ನೂ ಓದಿ: Vedio : ಬಟ್ಟೆ ಒಣಗಿಸಲು ಬಾಲ್ಕನಿಗೆ ಬಂದು 19ನೇ ಮಹಡಿಯಿಂದ ಜಾರಿ ಬಿದ್ದ ವೃದ್ದೆ ಮುಂದೆ...?


2015-16 ರಲ್ಲಿ ರಾಯಚೂರು, ಸಿಂಧನೂರು ಭಾಗದಲ್ಲಿ ಆಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆನಷ್ಟವಾಗಿತ್ತು, ಆಗ ನಮ್ಮ ಸರ್ಕಾರ ಪ್ರತೀ ಹೆಕ್ಟೇರ್ ಗೆ ರೂ. 25,000 ಪರಿಹಾರ ನೀಡಿತ್ತು.ಎನ್.ಡಿ.ಆರ್.ಎಫ್ ನಾರ್ಮ್ಸ್ ನಲ್ಲಿ ಸೂಚಿಸಿರುವುದಕ್ಕಿಂತ ಹೆಚ್ಚು ಪರಿಹಾರ ನಾವು ನೀಡಿದ್ದೆವು.ಈಗ ಬಿಜೆಪಿಯವರು ನಷ್ಟದಲ್ಲಿರುವ ರೈತರಿಗೆ ಗರಿಷ್ಠ ಪರಿಹಾರ ನೀಡಬೇಕು. ತಮ್ಮದು ರೈತರ ಸರ್ಕಾರ ಎಂದು ಹೇಳಿ ರೈತರಿಗೆ ಟೋಪಿ ಹಾಕುವ ಕೆಲಸ ಮಾಡಬಾರದು.ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡುತ್ತೇನೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.