ಬೆಂಗಳೂರು: ಬಿಜೆಪಿ ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೇಸರಿ, ಬಿಳಿ ಹಸಿರು ಬಣ್ಣಗಳ ತ್ರಿವರ್ಣ ಧ್ವಜವನ್ನು 1947ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜವಾಗಿ ಅಂಗೀಕರಿಸಿತ್ತು.ಈ ಬಣ್ಣಗಳು ಸಾರುವ ಶಾಂತಿ, ತ್ಯಾಗ, ಧೈರ್ಯ,ಸಾಮರ್ಥ್ಯ, ಭರವಸೆ ಮತ್ತು ಸರ್ವ ಸಮಾನ ಅಭಿವೃದ್ದಿಯ ಸಂದೇಶವನ್ನು ನಾವೆಲ್ಲರೂ ಗೌರವಿಸೋಣ.


ಮಾವನ ಐಷಾರಾಮಿ ಬಂಗಲೆಯನ್ನು ಇಷ್ಟು ಕೋಟಿಗೆ ಮಾರಿದ ಖ್ಯಾತ ಚಿತ್ರ ನಿರ್ಮಾಪಕನ ಸೊಸೆ!


ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ.


ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ 'ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ' ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ.


ಇದನ್ನೂ ಓದಿ: Bigg Boss Kannada: ಶುರುವಾಗಲಿದೆ ಮಿನಿ ಬಿಗ್​ಬಾಸ್! ಯಾರಿಗೆಲ್ಲ ಅವಕಾಶ?


ಬಿಜೆಪಿ ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು.


ಈ ಮೂಲಕ ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯಬೇಕು ಮತ್ತು ಖಾದಿ ಗ್ರಾಮದ್ಯೋಗದ ಅಭಿವೃದ್ದಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.