ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ- ಸಿದ್ಧರಾಮಯ್ಯ

ಬಿಜೆಪಿ  ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ. ಈಗ  ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Written by - ZH Kannada Desk | Last Updated : Sep 16, 2021, 10:51 PM IST
  • ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ.ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ.
  • ಇದು ಸಂವಿಧಾನದ ಮೇಲಿನ ದಾಳಿಯಾಗಿದೆ.ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ- ಸಿದ್ಧರಾಮಯ್ಯ

ಬೆಂಗಳೂರು: ಬಿಜೆಪಿ  ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ.ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ.ಇದು ಸಂವಿಧಾನದ ಮೇಲಿನ ದಾಳಿಯಾಗಿದೆ.ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಚುನಾವಣಾ ಆಯೋಗದ ಅಧಿಕಾರವನ್ನು ಕಿತ್ತುಕೊಂಡು  ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣಾ ಕ್ಷೇತ್ರಗಳ ಪುನರ್ ವಿಂಗಡನೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ಹೊರಟಿದೆ. ಈ ಕರಾಳ ಶಾಸನವನ್ನು ನಮ್ಮ ಪಕ್ಷ ಬಲವಾಗಿ ವಿರೋಧಿಸುತ್ತದೆ.

ಇದನ್ನೂ ಓದಿ: ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ: ಸಿದ್ದರಾಮಯ್ಯ ಆರೋಪ

ಚುನಾವಣಾ ಆಯೋಗಕ್ಕೆ ನೀಡಿರುವ ಮಾರ್ಗದರ್ಶಿಸೂತ್ರಗಳನ್ನು ನ್ಯಾಯಾಲಯದಲ್ಲಿ ಹಲವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪಿಗಿಂತ ಮೊದಲೇ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ತರಾತುರಿಯಲ್ಲಿ ಅನುಮೋದನೆ ಪಡೆಯಲು ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರುವುದು ಸರಿಯಲ್ಲ.

ಚುನಾವಣಾ ಆಯೋಗವು ಕ್ಷೇತ್ರಗಳ ಮೀಸಲಾತಿ ವಿಂಘಡನೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಅಭಿಪ್ರಾಯ ಸರ್ಕಾರಕ್ಕೆ ಇದ್ದಿದ್ದರೆ ಈ ಹಿಂದೆಯೇ ವಿಧೇಯಕಕ್ಕೆ ತಿದ್ದುಪಡಿ ಮಾಡಬೇಕಿತ್ತು, ಎರಡು ವರ್ಷದಿಂದ ಸುಮ್ಮನಿದ್ದು  ಚುನಾವಣೆ ಸಮೀಪಿಸುವ ವೇಳೆ  ತಿದ್ದುಪಡಿ ಮಾಡಲು ಹೊರಟಿರುವುದರ ಹಿಂದೆ ರಾಜಕೀಯ ಹುನ್ನಾರ ಇದೆ.

ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿಗೆ 1994ರಲ್ಲಿ ಜನತಾ ದಳದ ಸರ್ಕಾರ ಎಂ.ಪಿ.ಪ್ರಕಾಶ್ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಿತ್ತು. ಭೈರೇಗೌಡ, ನಾಣಯ್ಯ ಮತ್ತು ಪಿ.ಜಿ.ಆರ್ ಸಿಂಧ್ಯಾ ಜೊತೆ ನಾನೂ ಸಮಿತಿ ಸದಸ್ಯನಾಗಿದ್ದೆ. ಆ ಸಮಿತಿ ವರದಿ ಆಧಾರದಲ್ಲಿಯೇ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಗಿತ್ತು.

ಮಹಿಳೆಯರಿಗೆ 33% , ಹಿಂದುಳಿದ ಜಾತಿಗಳಿಗೆ 26.4% , ಹಿಂದುಳಿದ ಜಾತಿಗೆ ಸೇರದವರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ 6.6% ಮೀಸಲಾತಿ ನೀಡಬೇಕು ಎಂದು ನಮ್ಮ ಸಮಿತಿ ನೀಡಿದ್ದ ವರದಿಯನ್ನು ಆಧರಿಸಿ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಯಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ನಮ್ಮ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಪರಿಗಣಿಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೂ ಮೀಸಲಾತಿ ನೀಡಲಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ಎಚ್‌ಡಿಕೆ ಹುಸಿ ಜ್ಯಾತ್ಯತೀತ ನಾಯಕರು: ನಟ ಚೇತನ್ ಅಹಿಂಸಾ

ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದ್ದರು. ಈ ಮೀಸಲಾತಿಯನ್ನು ಬಿಜೆಪಿ(BJP)ಯ ರಾಜ್ಯಸಭಾ ಸದಸ್ಯ ದಿವಂಗತ ರಾಮಾ ಜೊಯಿಷ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು.

ಕಾಂಗ್ರೆಸ್ ಪಕ್ಷ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು ಎಂದು ಸಂವಿಧಾನ ತಿದ್ದುಪಡಿ ಮಾಡಿ, ಕಾನೂನು ಜಾರಿ ಮಾಡಿತು. ಇದರಿಂದ ಮಹಿಳೆಯರಿಗೆ ಗ್ರಾಮ ಪಂಚಾಯತ್. ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 50% ಮೀಸಲಾತಿ ಸಿಕ್ಕಿದೆ.

ಇದನ್ನೂ ಓದಿ: ಕಾಂಗ್ರೆಸ್ ಎತ್ತಿನಗಾಡಿ ಪ್ರತಿಭಟನೆಗೆ ಸಿದ್ದು & ಡಿಕೆಶಿ ಕಲಹದ ಬಂಡಿ ಎಂದ ಬಿಜೆಪಿ..!

ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ.ಈಗ  ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ.ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು.

ಇದನ್ನೂ ಓದಿ : ಗಂಡು ಮಗುವಿಗೆ ಜನ್ಮ ನೀಡಿಲ್ಲವೆಂದು ಪತ್ನಿ ಮೇಲೆ ಕುದಿಯುವ ನೀರೆರೆಚಿದ ನಿರ್ದಯ ಪತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

More Stories

Trending News