ಬೆಂಗಳೂರು: ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂಬಂಧ ಸಚಿವರು ಹಾಗೂ ಪಕ್ಷದ ನಾಯಕರ ಜೊತೆ ನಡೆಸಿದ ಸುದೀರ್ಘ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


COMMERCIAL BREAK
SCROLL TO CONTINUE READING

ಸಿಎಂ ಭಾಷಣದ ಮುಖ್ಯಾಂಶಗಳು:


ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ‌ ಹಾಕಿ ಚುನಾವಣೆ ನಿರ್ವಹಿಸಬೇಕು.


ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಜಿದ್ದಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು.


ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು.


ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ. 


ಇದನ್ನೂ ಓದಿ: ಪೊರಕೆ ಕೊಳ್ಳುವಾಗ ಈ ವಿಷಯಗಳನ್ನು ಗಮನದಲ್ಲಿಡಿ.. ಇಲ್ಲದಿದ್ದರೆ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ! ಬಡತನ-ಕಷ್ಟ ಎದುರಾಗುತ್ತೆ!


ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು, ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ


ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಂಕರ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ. 


ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.


https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T