ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,-ಸಿಎಂ ಸಿದ್ದರಾಮಯ್ಯ

 ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,ನರೇಂದ್ರ ಮೋದಿ ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ 'ಫೇಕ್ ನ್ಯೂಸ್ ಪೆಡ್ಲರ್ಗಳಾದ ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Manjunath N | Last Updated : Dec 17, 2023, 11:50 PM IST
  • ಅಶ್ವತ್ ನಾರಾಯಣ್ ಅವರೇ ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ
  • ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು
  • ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ
 ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,-ಸಿಎಂ ಸಿದ್ದರಾಮಯ್ಯ title=

ಬೆಂಗಳೂರು:  ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,ನರೇಂದ್ರ ಮೋದಿ ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ 'ಫೇಕ್ ನ್ಯೂಸ್ ಪೆಡ್ಲರ್ಗಳಾದ ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತಾಗಿ ತಮ್ಮ ಎಕ್ಷ್ ಪೋಸ್ಟ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದಾರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಗೌರವಾನ್ವಿತ ಮಾಜಿ ಶಾಸಕರಾದ ಸಿಟಿ ರವಿ ಅವರೇ,ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ.ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದುಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ.ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ.ನಿಮ್ಮ ಗಮನಕ್ಕಾಗಿ ಈ ಪೂರ್ತಿ ವೀಡಿಯೋ ನಾವು ನುಡಿದಂತೆ ನಡೆಯುವವರು,ಹಿಂದೆ 2013 -18 ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ,ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರಸರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು ಎಂದು ಹೇಳಿದರು.

ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ.ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ?ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ ಎಂದು ಕಿಡಿ ಕಾರಿದರು.

ಆದರೆ ಅಶ್ವತ್ ನಾರಾಯಣ್ ಅವರೇ ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ.ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು,ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ.ನೀವು ಶೇರ್ ಮಾಡಿರುವ ತಿರುಚಿದ  ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ.ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.ಬಿಜೆಪಿ ನಾಯಕರೇ,ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ನೀವು ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ಆಗ್ರಹಿಸಿದರು.

ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ ಬೊಗಳೆ ಜನತಾ ಪಾರ್ಟಿ ಎಂಬ ಕುಖ್ಯಾತಿಯನ್ನು ದೃಡೀಕರಿಸುವಂತಿದೆ ಎಂದು ಅವರು ಕುಟುಕಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News