ಬೆಂಗಳೂರು: ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-"ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ"


ಅವರು ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 


ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ-ಆಂಧ್ರ ಮಾಜಿ ಸಿಎಂ ಚಂದ್ರನಾಯ್ಡು ಬಂಧನ ಆಂಧ್ರ ಮಾಜಿ ಸಿಎಂ ಚಂದ್ರನಾಯ್ಡು ಬಂಧನ


ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ "INDIA" ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು "ಭಾರತ" ಎಂದು ಹೊಸದಾಗಿ ಹೇಳಲು ಹೊರಟಿದೆ. "ನಾವು ಭಾರತ್ ಜೋಡೋ ನಡೆಸಿದವರು". ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ,ಇಂಡಿಯಾದ ಘನತೆಯೂ ಗೊತ್ತಿಲ್ಲಎಂದು ಕಿಡಿ ಕಾರಿದರು.


ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.