Loksabha Election 2024: 2024 ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದ್ದು, ಮತ್ತೊಮ್ಮೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎಕ್ಸ್ ಮೂಲಕ ಸಂತಸ ವ್ಯಕ್ತಪಡಿಸಿರುವ ಅವರು ಹೀಗಂದಿದ್ದಾರೆ.
“ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಂದು ಬಾರಿ ಸ್ಪರ್ಧಿಸಲು ಅವಕಾಶ ನೀಡಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಹೃದಯಾಂತರಾಳದ ನಮನಗಳು. ಮಾನ್ಯ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಮಾರ್ಗದರ್ಶನ ಮತ್ತು ಸಹಕಾರವನ್ನು ಈ ಸಂದರ್ಭದಲ್ಲಿ ನೆನೆಯಲು ಇಚ್ಛಿಸುತ್ತೇನೆ” ಎಂದಿದ್ದಾರೆ.
ಇದನ್ನೂ ಓದಿ: ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು? ದೇವೇಗೌಡರ ಮಾತಲ್ಲೇ ವಿವರಿಸಿದ ಸಿಎಂ ಸಿದ್ದರಾಮಯ್ಯ
“ಹಿರಿಯರಾದ ಬಿಎಸ್ ಯಡಿಯೂರಪ್ಪ, ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಜಿವಿ ಅವರ ಪ್ರೋತ್ಸಾಹ ಕೂಡ ನನ್ನ ಪಾಲಿಗೆ ಶ್ರೀರಕ್ಷೆ” ಎಂದು ನುಡಿದಿದ್ದಾರೆ.
“5 ವರ್ಷಗಳ ಹಿಂದೆ ಪಕ್ಷದ ನಾಯಕತ್ವವು ದೇಶದ ಅತ್ಯಂತ ಪ್ರತಿಷ್ಠಿತ ಕ್ಷೇತ್ರ ಬೆಂಗಳೂರು ದಕ್ಷಿಣಕ್ಕೆ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ ನಂತರ ತಮ್ಮ ಮನೆ ಮಗನಂತೆ ನನ್ನನ್ನು ಆಶೀರ್ವದಿಸಿದ ಸಮಸ್ತ ಬೆಂಗಳೂರು ದಕ್ಷಿಣದ ನಾಗರಿಕರಿಗೆ ನಾನು ಎಂದೆಂದಿಗೂ ಋಣಿ. 17ನೇ ಲೋಕಸಭೆಯಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಸಂಸದನಾಗಿ ಆಯ್ಕೆಗೊಳಿಸಿ ಆಶೀರ್ವದಿಸಿದ ನನ್ನ ಕ್ಷೇತ್ರದ ಮತದಾರರ ಶ್ರೇಯೋಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ. ನನ್ನಂಥ ಯುವಕನಿಗೆ ಕಳೆದ 5 ವರ್ಷಗಳು ಅತ್ಯಂತ ಮಹತ್ವದ್ದಾಗಿದ್ದು, ಈ ಸಂದರ್ಭದಲ್ಲಿ ಅನೇಕ ಹೊಸ ಕಲಿಕೆಗಳಿಗೆ ಒಡ್ಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: Lokasabha Election 2024: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
”ಅವಿರತ ಶ್ರಮ, ಅತ್ಯುತ್ತಮ ತಂಡದೊಂದಿಗೆ ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ನಾಗರಿಕರು ನನ್ನನ್ನು ಅವರ ಕುಟುಂಬದ ಸದಸ್ಯರಂತೆ ಪರಿಗಣಿಸಿದ್ದು ಹೆಮ್ಮೆಯ ಸಂಗತಿ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಹಿಂದಿನ ಅನುಭವದ ಆಧಾರದಲ್ಲಿ ಮುಂದಿನ ವರ್ಷಗಳಲ್ಲಿ ಬೆಂಗಳೂರು & ರಾಜ್ಯದ ಪ್ರಗತಿಗೆ ನಾನು ಶ್ರಮಿಸುತ್ತೇನೆ. ಇದೇ ಸಂದರ್ಭದಲ್ಲಿ ನನ್ನೊಂದಿಗೆ ಕಾರ್ಯನಿರ್ವಹಿಸಿದ ಬೆಂಗಳೂರು ದಕ್ಷಿಣದ ನನ್ನ ಬಿಜೆಪಿ ಕಾರ್ಯಕರ್ತ ಸಹೋದರರ ಸಹಕಾರ ಎಂದೆಂದಿಗೂ ಮರೆಯಲಾರೆ. ನನ್ನ ವಿರೋಧಿಗಳ ಮಾತಿಗೆ ಕಿವಿಗೊಡದೆ ಗಟ್ಟಿಯಾಗಿ ನನ್ನೊಂದಿಗೆ ನಿಂತ ಸಾಮಾಜಿಕ ಜಾಲತಾಣ ಮಾಧ್ಯಮದ ಹಿತೈಷಿಗಳು ಹಾಗೂ ನನ್ನ ಕಾರ್ಯನಿರ್ವಹಣೆಯಲ್ಲಿ ಜೊತೆಗೂಡಿ ಸಹಕರಿಸಿದ ನನ್ನ ಸಹೋದರ, ಸಹೋದರಿಯರಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.