Chief Minister Siddaramaiah : ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ರಾಮ ಮಾರ್ಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರವಾಗಿ ಪ್ರಜಾಧ್ವನಿ -02 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನು ಓದಿ :Meghalaya: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ, 3 ಮಂದಿಯ ಬಂಧನ


ನರೇಂದ್ರ ಮೋದಿಯವರು 10 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಈ ದೇಶದ ಬಡವರಿಗೆ , ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಈ ವರ್ಗದ ಪರವಾಗಿ ಯಾವತ್ತೂ ಕೆಲಸ ಮಾಡಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧ,  ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ವಿರೋಧಿಯಾಗಿರುವ ಪಕ್ಷ. ಇದನ್ನು ಜನರು ಗಮನದಲ್ಲಿರಿಸಿಕೊಳ್ಳಬೇಕು. ನರೇಂದ್ರ ಮೋದಿ ನೀಡಿದ್ದ ಭರವಸೆಗಳನ್ನು ಒಮ್ಮೆ ನೆನಪಿಸಿಕೊಳ್ಳಿ.


ಭರವಸೆಗಳನ್ನು ಈಡೇರಿಸದಿದ್ದ ಮೇಲೆ ಅವರಿಗೆ ಮತ ಕೇಳುವ ನೈತಿಕತೆ ಇಲ್ಲ. ದೇಶದ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚಿಸಿದ್ದಾರೆ. ರೈತರ ಆದಾಯ ಎರಡು ಪಟ್ಟು ಹೆಚ್ಚಿಸುತ್ತೇವೆ ಎಂದು ಹೇಳಿ, 10 ವರ್ಷಗಳಲ್ಲಿ ಒಂದು ರೂಪಾಯಿ ಕೂಡ ಹೆಚ್ಚಾಗಿಲ್ಲ. ಅದಕ್ಕೆ ಬದಲಾಗಿ ವೆಚ್ಚ ಹೆಚ್ಚಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇನೆ ,ಬಡವರ, ಮಧ್ಯಮವರ್ಗದ ಜನರ ಬದುಕು ಹಸನು ಮಾಡುತ್ತೇವೆ, ಅಚ್ಚೇ ದಿನ್ ಬರುತ್ತದೆ ಎಂದು ಹೇಳಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದ್ದಾರೆ. ರೈತರ ಬೆಲೆಗಳಿಗೆ ನ್ಯಾಯಯುತ ಬೆಲೆ, ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದರು. ರೈತರು ಕೆಲವು ತಿಂಗಳಿನಿಂದ ಸಾಲ ಮನ್ನಾ, ಎಂ.ಎಸ್.ಪಿ ಕೊಡಲು ಕಾನೂನು ಮಾಡಬೇಕೆಂದು ಚಳುವಳಿ ಮಾಡುತ್ತಿದ್ದಾರೆ. ರೈತರು ಸತ್ತರೂ ಅವರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಲಿಲ್ಲ ಎಂದರು.  


10 ವರ್ಷಗಳಲ್ಲಿ ಬಿಜೆಪಿ  ಯಾವ ಭರವಸೆಗಳನ್ನು ಈಡೇರಿಸಿಲ್ಲ..
ನರೇಂದ್ರ ಮೋದಿಯವರು  ಅವರು 10 ವರ್ಷಗಳಲ್ಲಿ ನೀಡಿದ್ದ ಯಾವ ಭರವಸೆಗಳನ್ನು ಬಗೆಹರಿಸಿಲ್ಲ. ನಾವು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೇ 30 ಹೊಸ ಯೋಜನೆಗಳನ್ನು ಜಾರಿ ಮಾಡಿದ್ದೇವೆ. 2023 ರಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಅನೇಕ ಭರವಸೆ ನೀಡಿ, 82 ಭರವಸೆಗಳನ್ನು ಈಡೇರಿಸಿ 5 ಗ್ಯಾರಂಟಿಗಳನ್ನೂ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಜಾರಿ ಮಾಡಿದ್ದೇವೆ. 195 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿ ಅದರ ಮತ್ತ ಉಳಿತಾಯವಾಗಿದೆ. ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.


ಬಿಜೆಪಿ, ನರೇಂದ್ರ ಮೋದಿ ನುಡಿದಂತೆ ನಡೆಯದೇ ಸುಳ್ಳು ಹೇಳಿಕೊಂಡು ದೇಶದ ಉದ್ದಗಲಕ್ಕೂ ತಿರುಗುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. 34000 ಕೋಟಿ ರೂ.ಗಳನ್ನು ಕಳೆದ ವರ್ಷ ಹಾಗೂ ಪ್ರಸಕ್ತ ಸಾಲಿನಲ್ಲಿ 52009 ಕೋಟಿ ರೂ.ಗಳನನು ಮೀಸಲಿರಿಸಲಾಗಿದೆ.  1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗಾಗಿ ಮೀಸಲಿರಿಸಿದೆ. ಬಿಜೆಪಿಯವರು ಬಜೆಟ್ ನ್ನು ಓದಬೇಕು. ಬಜೆಟ್ ನಲ್ಲಿ 68000 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ದಿಗೆ ಇಟ್ಟಿದ್ದೇವೆ.  


ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಎಂ.ಎಸ್.ಪಿ ಯನ್ನು ಕಾನೂನಿನ ಚೌಕಟ್ಟಿಗೆ ತರಲಾಗುವುದು.   ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಿಲ್ಲ. ಆದರೆ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 72000 ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದಾರೆ . ನಮ್ಮ ಅವಧಿಯಲ್ಲಿ ರಾಜ್ಯ ಸರ್ಕಾರ 50,000 ರೂ.ಗಳ ವರೆಗೆ ಸೊಸೈಟಿಗಳಲ್ಲಿ ಪಡೆದ ಬೆಳೆ ಸಾಲವನ್ನು  27 ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿತು. 8165 ಕೋಟಿ ರೂ.ಗಳನ್ನು ಸಾಲ ಮಾಡಿ ಭರಿಸಿತು. ಆದರೆ ನರೇಂದ್ರ ಮೋದಿಯವರು ರೈತರಿಗಾಗಿ ಬೇಡಿಕೆ ಇದ್ದರೂ ಸಾಲ ಮಾಡಿಲ್ಲ. ಆದರೆ ಬಂಡವಾಳಶಾಹಿಗಳು, ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದ್ದಾರೆ. ನರೇಂದ್ರ ಮೋದಿಯವರು ಶ್ರೀಮಂತರ ಪರವಾಗಿ ಇದ್ದಾರೆ ಎಂದರು.


ಇದನ್ನು ಓದಿ :Manipur : ಮಣಿಪುರದಲ್ಲಿ ಐಇಡಿ ಸ್ಫೋಟದಿಂದ ರಾಷ್ಟ್ರೀಯ ಹೆದ್ದಾರಿ ಸೇತುವೆ ಹಾನಿ 


ಅದಾನಿ, ಅಂಬಾನಿಗೆ ಸಹಾಯ
ಶೇ 30% ಇದ್ದ ಕಾಪೋರೇಟ್ ತೆರಿಗೆಯನ್ನು 27% ಗಿಳಿಸಿ, ಅದಾನಿ, ಅಂಬಾನಿಗೆ ಸಹಾಯ ಮಾಡಿದ್ದಾರೆ.  ಸಾಮಾನ್ಯ ಜನರ ಪರೋಕ್ಷ ತೆರಿಗೆಯನ್ನು 50% ಗೇರಿಸಿದರು. ಬಡವರು ಮಧ್ಯಮ ವರ್ಗದವರ ತೆರಿಗೆ ಹೆಚ್ಚಿಸಿ, ಶ್ರೀಮಂತರ ತೆರಿಗೆಯನ್ನು ಕಡಿಮೆ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿಯನ್ನು ತಿರಸ್ಕರಿಸಬೇಕೆಂದು ಕರೆ ನೀಡಿದರು. ಕಿರಿಯ ವಯಸ್ಸಿನ ಸಾಗರ್ ಖಂಡ್ರೆಯವರನ್ನು ನಮ್ಮ ಅಭ್ಯರ್ಥಿಯಾಗಿಸಿದ್ದು,  ಅವರಿಗೆ ನಿಮ್ಮ ಮತವನ್ನು ಹಾಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಶಾಸಕ ಬಿ.ಆರ್. ಪಾಟೀಲ್, ಶಾಸಕರಾದ ಅಜಯ್ ಸಿಂಗ್, ಅಭ್ಯರ್ಥಿ ಸಾಗರ್ ಖಂಡ್ರೆ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.