ಬೆಂಗಳೂರು: ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು


"ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದರು.


ಇದನ್ನೂ ಓದಿ: ಇಂದು ಮೆಟ್ರೋ ವಿಸ್ತೃತ ಮಾರ್ಗ ಅಧಿಕೃತ ಉದ್ಘಾಟನೆ
 
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು


ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.


ಇದನ್ನೂ ಓದಿ: ಕಾಲುವೆಗೆ ನೀರು ಹರಿಸೋ ಬಗ್ಗೆ ಅಧಿಕಾರಿಗಳ ಕಳ್ಳಾಟ ಆರೋಪ: ಅಧಿಕಾರಿಗಳ ವಿರುದ್ಧ ಎಮ್‌ಎಲ್‌ಏ ಗರಂ


ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದು ಆಗ್ರಹಿಸಿದರು.


ಇದೇ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ " ನಮ್ಮ ಕುಟುಂಬವನ್ನು ಎ.ಕೃಷ್ಣಪ್ಪ ಅವರ ಕುಟುಂಬ ಎಂದು ಗುರುತಿಸುತ್ತಾರೆ. ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪ ಅವರ ಮಗಳು ಎಂದು ಗುರುತಿಸುತ್ತಾರೆ. ಎಲ್ಲರ ಅಪೇಕ್ಷೆ ಮೇರೆಗೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.


ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೀರಿ. ನಮ್ಮ ಸೇರ್ಪಡೆಯಿಂದ ಪಕ್ಷಕ್ಕೂ ಅನುಕೂಲವಾಗಬೇಕು. ನಮ್ಮದೇ ರೀತಿಯಲ್ಲಿ ಅನೇಕ ಹಿಂದುಳಿದ ವರ್ಗದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸಿಗುವಂತಾಗಬೇಕು. ಆಗ ಪಕ್ಷಕೂಡ ಬಲಿಷ್ಠವಾಗುತ್ತದೆ. ಇದಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡುತ್ತೇನೆ ಎಂದರು.


ಇದನ್ನೂ ಓದಿ: ಜಿನ್ನಾ ಜೀನ್ಸಿನ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್‌, ಬಿಜೆಪಿ ಭಯ ಶುರುವಾಗಿದೆ..!


ನಾನು ಸಿದ್ಧಾಂತ ಒಪ್ಪಿ ಇಂದು ಕಾಂಗ್ರೆಸ್ ಸೇರಿದ್ದೇನೆ. ಅನೇಕರು ನನಗೆ ನಿನ್ನಲ್ಲಿ ಇನ್ನು ಕಾಂಗ್ರೆಸ್ ರಕ್ತವಿದೆ ಎಂದು ಹೇಳುತ್ತಿದ್ದರು.ಅದೇ ನನ್ನನ್ನು ಇಂದು ಮತ್ತೆ ಕಾಂಗ್ರೆಸ್ ಪಕ್ಷದತ್ತ ಕರೆತಂದಿದೆ. ನಾವು ಎಲ್ಲಿ ಕೆಲಸ ಮಾಡುತ್ತೇವೋ ಅಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ನಮ್ಮ ತಂದೆ ನನಗೆ ಹೇಳಿಕೊಟ್ಟಿದ್ದಾರೆ. ಅವರು ನನಗೆ ದೇವರಾಜ ಅರಸು, ಕೆ.ಹೆಚ್ ಪಾಟೀಲ್ ನಸೀರ್, ಸಿದ್ದರಾಮಯ್ಯ ಅವರ ವಿಚಾರಗಳನ್ನು ಹೇಳುತ್ತಿದ್ದರು. ಅದನ್ನು ನಾನು ಕೇಳಿ ಬೆಳದವಳು. ಅದರಿಂದ ಪ್ರೇರಿತಳಾಗಿ ನಾನು ರಾಜಕೀಯದತ್ತ ಮುಖ ಮಾಡಿದ್ದೇನೆ. ನಾನು ಮತ್ತೆ ಕಾಂಗ್ರೆಸ್ ನಿಂದ ಮತ್ತೊಂದು ಪಯಣ ಆರಂಭಿಸುತ್ತಿದ್ದು, ಈ ಪಯಣದಿಂದ ಎಲ್ಲರಿಗೂ ಶುಭವಾಗಲಿ. ನಮ್ಮ ಮೇಲೆ ವಿಶ್ವಾಸವಿಟ್ಟು ಇಲ್ಲಿಗೆ ಬಂದಿರುವ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.