ಬೆಂಗಳೂರು: ಬಿಜೆಪಿ ಪಕ್ಷ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕೃತಿಯ ವಿರೋಧಿ. ಮುಖ್ಯವಾಗಿ ಬಿಜೆಪಿಯು ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


COMMERCIAL BREAK
SCROLL TO CONTINUE READING

ಅವರು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸೌಮ್ಯ ರೆಡ್ಡಿಯವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ಇದನ್ನೂ ಓದಿ: Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!


2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಬೇಕು.ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆಯರನ್ನು ಸಜ್ಜುಗೊಳಿಸಿ, ಪಕ್ಷ ಸಂಘಟನೆ ಮಾಡುವ ಸಾಮರ್ಥ್ಯ ಸೌಮ್ಯರೆಡ್ಡಿಯವರಿಗೆ ಇದ್ದು, ಈ ದಿಕ್ಕಿನಲ್ಲಿ ಅವರು ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.


ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ ಎಂದು ಅವರು ಕಿಡಿ ಕಾರಿದರು.


ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ


ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು.
ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ. ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನೂ ವಿರೋಧಿಸುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ಮಹಿಳೆಯರೇ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂವಿಧಾನ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಬಿಜೆಪಿಯವರ ಗುರೂಜಿ ಸಾವರ್ಕರ್ ಸಂವಿಧಾನ ವಿರೋಧಿಸಿದ್ದರು.ಈ ಇತಿಹಾಸವನ್ನು ಮಹಿಳಾ ಕಾಂಗ್ರೆಸ್ ಘಟಕ ರಾಜ್ಯದ ಮಹಿಳೆಯರು, ಯುವತಿಯರಿಗೆ ಸರಿಯಾಗಿ ಮನದಟ್ಟು ಮಾಡಿಸಬೇಕು ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.